News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೂರ್ಯ, ಅಜಯ್‌ ದೇವಗನ್‌ಗೆ ಒಲಿದ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ತನ್ಹಾಜಿ: ದಿ ಅನ್‌ಸಂಗ್ ವಾರಿಯರ್ ಚಿತ್ರಕ್ಕಾಗಿ ಬಾಲಿವುಡ್ ನಟ ಅಜಯ್ ದೇವಗನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. ಸೂರರೈ ಪೊಟ್ರುಗಾಗಿ ತಮಿಳು ನಟ ಸೂರ್ಯ ಅವರು ಕೂಡ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಅಜಯ್ ದೇವಗನ್‌ ಅವರು ಈ ಮೂಲಕ ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಇದಕ್ಕೂ ಮೊದಲು ಅವರು 1998 ರಲ್ಲಿ ಝಖ್ಮ್ ಮತ್ತು 2002 ರಲ್ಲಿ ದಿ ಲೆಜೆಂಡ್ ಆಫ್ ಭಗತ್ ಸಿಂಗ್ ಸಿನಿಮಾಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.

ತನ್ಹಾಜಿ ಸಿನಿಮಾದಲ್ಲಿ ಅವರು ವೀರ ಮರಾಠ ಯೋಧ ತನ್ಹಾಜಿ ಮಲ್ಸುರೆ ಪಾತ್ರವನ್ನು ನಿರ್ವಹಿಸಿದ್ದಾರೆ, ಇದು 2020 ರ ಅತಿದೊಡ್ಡ ಬಾಕ್ಸ್ ಆಫೀಸ್ ಹಿಟ್ ಆದ ಸಿನಿಮಾ. ಇದು ಜನವರಿ 2020 ರಲ್ಲಿ ಬಿಡುಗಡೆಯಾಗಿ ಭಾರತದಾದ್ಯಂತ ಮತ್ತು ಪ್ರಪಂಚದಾದ್ಯಂತ ಪ್ರೇಕ್ಷಕರ ಹೃದಯಗಳನ್ನು ಗೆದ್ದಿದೆ.

ಸೂರರೈ ಪೊಟ್ರು ಚಿತ್ರದಲ್ಲಿ ಕ್ಯಾಪ್ಟನ್ ಜಿ ಆರ್ ಗೋಪಿನಾಥ್ ಅವರಿಂದ ಪ್ರೇರಿತ ಪಾತ್ರವನ್ನು ನಿರ್ವಹಿಸಿದ ಸೂರ್ಯ ಅವರಿಗೂ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top