News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಂದ್‌ಗೆ ಬೀಳ್ಕೊಡುಗೆ ಔತಣಕೂಟ ಏರ್ಪಡಿಸಿದ ಮೋದಿ: ಬುಡಕಟ್ಟು ನಾಯಕರು ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ನವದೆಹಲಿಯಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೀಳ್ಕೊಡುಗೆ ಔತಣಕೂಟವನ್ನು ಏರ್ಪಡಿಸಿದ್ದರು. ಕೇಂದ್ರ ಸಚಿವ ಸಂಪುಟದ ಸದಸ್ಯರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಕೂಡ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗವಹಿಸಿದ್ದರು.

ಈ ಔತನಕೂಟ ಒಂದು ಅರ್ಥದಲ್ಲಿ ವಿಶಿಷ್ಟವಾಗಿತ್ತು, ದೆಹಲಿಯ ಗಣ್ಯ ವ್ಯಕ್ತಿಗಳನ್ನು ಇದು ಹೊಂದಿರಲಿಲ್ಲ ಬದಲಾಗಿ ಇದು ದೇಶದ ಎಲ್ಲಾ ಭಾಗಗಳಿಂದ ಉತ್ತಮ ಪ್ರಾತಿನಿಧ್ಯವನ್ನು ಹೊಂದಿದ್ದ ಕೂಟವಾಗಿತ್ತು. ಇದರಲ್ಲಿ ವಿವಿಧ ಪದ್ಮ ಪ್ರಶಸ್ತಿ ಪುರಸ್ಕೃತರು ಹಾಗೂ ಹಲವು ಬುಡಕಟ್ಟು ಮುಖಂಡರು ಕೂಡ ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಪ್ರಧಾನಿ ಸಂಪುಟದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಭಾಗವಹಿಸಿದ್ದರು.

ಕೋವಿಂದ್‌ ಅವರ ಅಧಿಕಾರವಧಿ ಸೋಮವಾರ ಕೊನೆಯಾಗಲಿದೆ. ಮುರ್ಮ ಅವರಿಗೆ ಅಂದು ಮುಖ್ಯ ನ್ಯಾಯಮೂರ್ತಿಗಳು  ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top