News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಳೆದ 5 ವರ್ಷದಲ್ಲಿ ರೈಲ್ವೆ ಸಿ ಗ್ರೂಪ್‌ ಹುದ್ದೆಗೆ 1.68 ಲಕ್ಷ ಮಂದಿ ನೇಮಕ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಭಾರತೀಯ ರೈಲ್ವೇಯಿಂದ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ 1 ಲಕ್ಷದ 68 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೇಮಕಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದಾರೆ.

2019-20ನೇ ಹಣಕಾಸು ವರ್ಷದಲ್ಲಿ 1 ಲಕ್ಷದ 27 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು 5, 558 ಅಭ್ಯರ್ಥಿಗಳು ನೇಮಕಗೊಂಡಿದ್ದಾರೆ ಎಂದು ನಿನ್ನೆ ರಾಜ್ಯಸಭೆಯಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಲಿಖಿತ ಉತ್ತರದಲ್ಲಿ  ತಿಳಿಸಿದ್ದಾರೆ.

ಕಳೆದ ಎಂಟು ವರ್ಷಗಳಲ್ಲಿ ವಾರ್ಷಿಕ ಸರಾಸರಿ 43,678 ಮಂದಿಗೆ ಹೋಲಿಸಿದರೆ ಮುಂದಿನ ಒಂದು ವರ್ಷದಲ್ಲಿ 1,48,463 ಜನರನ್ನು ನೇಮಕ ಮಾಡಿಕೊಳ್ಳುವುದಾಗಿ ರೈಲ್ವೆ ಸಚಿವಾಲಯ ಕಳೆದ ತಿಂಗಳು ಹೇಳಿತ್ತು.

ಮುಂದಿನ 18 ತಿಂಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ ನಂತರ ರೈಲ್ವೆ ಈ ಘೋಷಣೆಯನ್ನು ಮಾಡಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top