News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರು: ಆ.5ರಿಂದ ಪುನೀತ್‌ ರಾಜ್‌ಕುಮಾರ್‌ ಹೆಸರಲ್ಲಿ ಪುಷ್ಪ ಪ್ರದರ್ಶನ

ಬೆಂಗಳೂರು: ಆಗಸ್ಟ್ 5 ರಿಂದ 15 ರವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ದಿವಂಗತ ಚಿತ್ರನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ತೋಟಗಾರಿಕಾ ಸಚಿವ ಮುನಿರತ್ನ ಅವರು, “ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿರಲಿಲ್ಲ. ಈ ಬಾರಿ ಕೋವಿಡ್ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಪ್ರದರ್ಶನ ಆಯೋಜಿಸಲಾಗುತ್ತದೆ. ಆಗಸ್ಟ್ 5ರಂದು ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ” ಎಂದಿದ್ದಾರೆ.

ಪುಷ್ಪ ಪ್ರದರ್ಶನಕ್ಕೆ ವಿದೇಶಗಳಿಂದ ಹೂ ತರಿಸಲಾಗುತ್ತದೆ. ಪುನೀತ್ ರಾಜಕುಮಾರ್ ಮತ್ತು ಡಾ. ರಾಜಕುಮಾರ್ ಅವರ ಪ್ರತಿಮೆಗಳನ್ನು ಪುಷ್ಪಗಳಿದ್ದ ಅಲಂಕರಿಸಲಾಗುತ್ತದೆ ಎಂದಿದ್ದಾರೆ.

ಪುಷ್ಪ ಪ್ರದರ್ಶನ ವೀಕ್ಷಣೆಗೆ ಆಗುಮಿಸುವವರಿಗೆ ಪ್ರವೇಶ ಶುಲ್ಕ ಇಡುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top