News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ಕೋವಿಂದ್

ನವದೆಹಲಿ: ಭಾರತದ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಳೆಗೆ ಅವರ ಅಧಿಕಾರವಧಿ ಕೊನೆಗೊಳ್ಳಲಿದೆ.

ರಾಮನಾಥ್ ಕೋವಿಂದ್ ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೊ (AIR) ಸೇರಿದಂತೆ, ರಾಷ್ಟ್ರೀಯ ನೆಟ್‌ವರ್ಕ್ ಚಾನೆಲ್‌ನಲ್ಲಿ ಸಂಜೆ 7 ಗಂಟೆಯಿಂದ ನೇರ ಪ್ರಸಾರ ಮಾಡಲಾಗುತ್ತಿದೆ, ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದೆ.

ದ್ರೌಪದಿ ಮುರ್ಮು ಅವರು ಭಾರತದ ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾದ್ದು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಸೋಮವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶದ 15 ನೇ ರಾಷ್ಟ್ರಪತಿಯಾಗುತ್ತಾರೆ.

ಮುರ್ಮು ಬುಡಕಟ್ಟು ಜನಾಂಗದ ಹಿನ್ನೆಲೆಯಿಂದ ಬಂದು ರಾಷ್ಟ್ರಪತಿಯಾದ ಮೊದಲ ವ್ಯಕ್ತಿಯಾಗಲಿದ್ದಾರೆ ಮತ್ತು  ಎರಡನೇ ಮಹಿಳೆಯಾಗಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top