ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ದೇಶದ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ ರಮಣ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ದ್ರೌಪದಿ ಮುರ್ಮು , ” ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸುತ್ತಿರುವ ಸಮಯದಲ್ಲಿ ಅಧಿಕಾರ ವಹಿಸಿಕೊಳ್ಳಲು ನನಗೆ ಗೌರವವಿದೆ” ಎಂದು ಹೇಳಿದ್ದಾರೆ. ಅವರು ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮುರ್ಮು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಸ್ ಜೈಶಂಕರ್, ಅಮಿತ್ ಶಾ ಸೇರಿದಂತೆ ಇತರರ ಸಮ್ಮುಖದಲ್ಲಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿರ್ಗಮಿತ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಭಾನುವಾರ ತಮ್ಮ ವಿದಾಯ ಭಾಷಣ ಮಾಡಿದ್ದು, ಹವಾಮಾನ ಬಿಕ್ಕಟ್ಟು ಭೂಮಿಯ ಭವಿಷ್ಯಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.
“ತಾಯಿ ಪ್ರಕೃತಿಯು ಆಳವಾದ ಸಂಕಟದಲ್ಲಿದ್ದಾಳೆ ಮತ್ತು ಹವಾಮಾನ ಬಿಕ್ಕಟ್ಟು ಈ ಭೂಮಿಯ ಭವಿಷ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ನಮ್ಮ ಮಕ್ಕಳ ಹಿತದೃಷ್ಟಿಯಿಂದ ನಮ್ಮ ಪರಿಸರ, ನಮ್ಮ ನೆಲ, ಗಾಳಿ, ಜಲದ ಬಗ್ಗೆ ಕಾಳಜಿ ವಹಿಸಬೇಕು” ಎಂದು ಕರೆ ನೀಡಿದ್ದಾರೆ.
LIVE: Swearing-in-Ceremony of the President-elect Smt Droupadi Murmu https://t.co/34DbgoUw1H
— President of India (@rashtrapatibhvn) July 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.