News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ: ವಿವಿಧ ಕೇಂದ್ರ ಸಚಿವರ ಭೇಟಿ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರದ ಸಚಿವರುಗಳನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಭಾನುವಾರ ಮಧ್ಯಾನ ದೆಹಲಿಗೆ ಆಗಮಿಸಿರುವ ಬೊಮ್ಮಾಯಿ, ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದರು.

ಇಂದು ಬೆಳಗ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ನಂತರ ಮುಖ್ಯಮಂತ್ರಿಗಳು ಕೇಂದ್ರ ವಾರ್ತಾ ಮತ್ತು ಪ್ರಚಾರ ಇಲಾಖೆಯ ರಾಜ್ಯ ಸಚಿವ ಲೋಗನಾಥನ್ ಮುರುಗನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಹಡಗು, ಜಲ ಸಾರಿಗೆ ಮತ್ತು ಆಯುಷ್ ಖಾತೆ ಸಚಿವ ಸರ್ಬಾನಂದ ಸೋನಾವಲ್ ಅವರನ್ನು ಕೂಡ ಭೇಟಿಯಾಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top