News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿವಸೇನೆಯನ್ನು ಉಳಿಸಿಕೊಳ್ಳಲು ಸುಪ್ರೀಂ ಕದತಟ್ಟಿದ ಉದ್ಧವ್‌ ಠಾಕ್ರೆ ಬಣ

ಮುಂಬಯಿ: ತಮ್ಮ ಪಕ್ಷ  ಶಿವಸೇನೆಯನ್ನು ಉಳಿಸಿಕೊಳ್ಳುವ ಸಲುವಾಗಿ  ಉದ್ಧವ್ ಠಾಕ್ರೆ ಅವರ ಬಣ ಸುಪ್ರೀಂಕೋರ್ಟ್ ಕದತಟ್ಟಿದೆ.

ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಬಣವನ್ನು ನೈಜ ಶಿವಸೇನೆ ಎಂದು ಗುರುತಿಸುವ ಭಾರತೀಯ ಚುನಾವಣಾ ಆಯೋಗದ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಅವರು ಸುಪ್ರೀಂಕೋರ್ಟಿಗೆ ಮನವಿ ಮಾಡಿದ್ದಾರೆ.

ಶಿಂಧೆ ಅವರ ಬಣ ಚುನಾವಣೆ ಚಿಹ್ನೆಗಳ ಆದೇಶ 1968ರ 15ನೇ ನಿಯಮದ ಅಡಿಯಲ್ಲಿ ಚುನಾವಣಾ ಆಯೋಗದಿಂದ ಶಿವಸೇನೆ ಎಂದು ಮಾನ್ಯತೆ ಪಡೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಅಲ್ಲದೇ ಶಿವಸೇನೆಗೆ ನೀಡಿರುವ ಚಿಹ್ನೆಯನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಳ್ಳುವುದಾಗಿ ಪ್ರತಿಪಾದಿಸಿದ್ದಾರೆ. ಈ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ಶಿವಸೇನಾ ಪ್ರಧಾನ ಕಾರ್ಯದರ್ಶಿ ಸುಭಾಷ್ ದೇಸಾಯಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top