News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

PMAY (U) ಗೆ 7 ವರ್ಷ: ಇದುವರೆಗೆ 1.22 ಕೋಟಿ ಮನೆಗಳ ಮಂಜೂರು

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರದ ಅಡಿಯಲ್ಲಿ ಸರ್ಕಾರ ಇದುವರೆಗೆ 1 ಕೋಟಿ 22 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ.

ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ನಿನ್ನೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.

ಎಲ್ಲರಿಗೂ ವಸತಿ ಎಂಬ ದೃಷ್ಟಿಯಲ್ಲಿ ನಗರ ಪ್ರದೇಶದ ಫಲಾನುಭವಿಗಳಿಗೆ ಸರ್ವಋತು ಪಕ್ಕಾ ಮನೆಗಳನ್ನು ಒದಗಿಸುವ ಉದ್ದೇಶದಿಂದ 2015 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಯಿತು.

ಮಂಜೂರಾದ ಮನೆಗಳ ಪೈಕಿ ಸುಮಾರು ಒಂದು ಕೋಟಿ ಎರಡು ಲಕ್ಷ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದರು. ಯೋಜನೆ ಆರಂಭವಾದಾಗಿನಿಂದ 61 ಲಕ್ಷ ಮನೆಗಳು ಪೂರ್ಣಗೊಂಡು ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

25 ಜೂನ್ 2015 ರಂದು ಅನುಷ್ಠಾನಕ್ಕೆ ತರಲಾದ ಈ ಯೋಜನೆಯು 7 ವರ್ಷಗಳನ್ನು ಪೂರೈಸಿದ್ದು, ಸೂರಿಲ್ಲದ ಬಡವರ ಸೂರಿನ ಕನಸನ್ನು ಸಾಕಾರಗೊಳಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News