ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಎರಡನೇ ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.
ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಧ್ಯ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಲೇನ್‌ನಲ್ಲಿರುವ ಇಡಿ ಕಚೇರಿಯನ್ನು ತಲುಪಿದ್ದಾರೆ. ಪ್ರಿಯಾಂಕಾ ಗಾಂಧಿ ತಾಯಿ ಜೊತೆ ಇಡಿ ಕಚೇರಿಯಲ್ಲಿಯೇ ಉಳಿದುಕೊಂಡಿದ್ದರೆ, ರಾಹುಲ್ ಗಾಂಧಿ ವಾಪಾಸ್ಸಾಗಿದ್ದಾರೆ.
ಜುಲೈ 21 ರಂದು ಸೋನಿಯಾ ಗಾಂಧಿ ಅವರನ್ನು ಮೊದಲ ದಿನದ ವಿಚಾರಣೆಯ ಸಂದರ್ಭದಲ್ಲಿ ಎರಡು ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಅಲ್ಲಿ ಅವರು 28 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಕಾಂಗ್ರೆಸ್ ಅಡಿಯ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಲಾಗಿದೆ.
#WATCH | Congress interim president Sonia Gandhi arrives at the ED office in Delhi for the second round of questioning in connection with the National Herald case.
Her daughter and party leader Priyanka Gandhi Vadra has also accompanied her. pic.twitter.com/8q1ScJgktr
— ANI (@ANI) July 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.