News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರನ್ನು ರಾಷ್ಟ್ರಪತಿ ಭವನದಲ್ಲಿ ಮೊದಲ ಬಾರಿಗೆ ಭೇಟಿ ಮಾಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.

ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಕೂಡ ತಮ್ಮ ಪುತ್ರಿಯೊಂದಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾದರು.

ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ಇಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದಾರೆ.

ಮುರ್ಮು ಸೋಮವಾರ ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top