News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೇನಾ ಪಡೆಗಳ ಮುಖ್ಯಸ್ಥರಿಂದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚಣೆ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಇಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು.

1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಭಾರತವು ವಿಜಯ ಸಾಧಿಸಿದುದನ್ನು ಸ್ಮರಿಸಲು ಕಾರ್ಗಿಲ್ ವಿಜಯ್ ದಿವಸ್ ಅನ್ನು ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ.

ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಗಲಿದ ವೀರ ಯೋಧರಿಗೆ ಪುಷ್ಪಾರ್ಚನೆ ಮಾಡಿದರು.

ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲೂ ಹಲವು ಗಣ್ಯರು, ಸೇನಾಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿ, ಕರ್ತವ್ಯದ ವೇಳೆ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

“ಭಾರತೀಯ ಸೇನೆಯ ಶೌರ್ಯ ಮತ್ತು ವಿಜಯಕ್ಕೆ ಇಡೀ ರಾಷ್ಟ್ರವು ತಲೆಬಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಮೂಲಕ ನಾವು ಅವರ ತ್ಯಾಗವನ್ನು ಕೃತಜ್ಞತೆಯ ಭಾವದಿಂದ ಸ್ಮರಿಸುತ್ತೇವೆ” ಎಂದು‌ ರ್ಗಿಲ್‌ನ ಡ್ರಾಸ್‌ನಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (ಜಿಒಸಿ-ಇನ್-ಸಿ) ನಾರ್ದರ್ನ್ ಕಮಾಂಡ್, ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top