News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಚೆನ್ನೈನಲ್ಲಿ ಚೆಸ್‌ ಒಲಿಂಪಿಯಾಡ್‌ಗೆ ಚಾಲನೆ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಮತ್ತು ಶುಕ್ರವಾರ ಗುಜರಾತ್ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ, ಗುಜರಾತ್‌ನ ಸಬರಕಾಂತದ ಗಧೋಡಾ ಚೌಕಿಯಲ್ಲಿ ಒಂದು ಸಾವಿರ ಕೋಟಿ ರೂಪಾಯಿಗಳ ಸಬರ್ ಡೈರಿಯ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮೋದಿ ಮಾಡಲಿದ್ದಾರೆ. ಈ ಯೋಜನೆಗಳು ಸ್ಥಳೀಯ ರೈತರು ಮತ್ತು ಹಾಲು ಉತ್ಪಾದಕರನ್ನು ಸಬಲೀಕರಣಗೊಳಿಸುತ್ತವೆ ಮತ್ತು ಅವರ ಆದಾಯವನ್ನು ಹೆಚ್ಚಿಸುತ್ತವೆ. ಇದು ಈ ಪ್ರದೇಶದ ಗ್ರಾಮೀಣ ಆರ್ಥಿಕತೆಗೆ ಉತ್ತೇಜನವನ್ನು ನೀಡುತ್ತದೆ.

ನಾಳೆ ಸಂಜೆ 6 ಗಂಟೆಗೆ ಚೆನ್ನೈನ ಜೆಎಲ್‌ಎನ್ ಒಳಾಂಗಣ ಕ್ರೀಡಾಂಗಣದಲ್ಲಿ 44ನೇ ಚೆಸ್ ಒಲಿಂಪಿಯಾಡ್‌ಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಚೆಸ್ ಒಲಿಂಪಿಯಾಡ್ ಜುಲೈ 28 ರಿಂದ ಆಗಸ್ಟ್ 9 ರವರೆಗೆ ಚೆನ್ನೈನಲ್ಲಿ ನಡೆಯಲಿದೆ. 1927 ರಿಂದ ಆಯೋಜಿಸಲಾಗುತ್ತಿರುವ ಪ್ರತಿಷ್ಠಿತ ಸ್ಪರ್ಧೆಯನ್ನು ಭಾರತದಲ್ಲಿ ಮೊದಲ ಬಾರಿಗೆ ಮತ್ತು 30 ವರ್ಷಗಳ ನಂತರ ಏಷ್ಯಾದಲ್ಲಿ ಆಯೋಜಿಸಲಾಗುತ್ತಿದೆ. 187 ದೇಶಗಳು ಭಾಗವಹಿಸಲಿದೆ, ಇದು ಯಾವುದೇ ಚೆಸ್ ಒಲಿಂಪಿಯಾಡ್‌ನ ಅತಿದೊಡ್ಡ ಭಾಗವಹಿಸುವಿಕೆಯಾಗಿದೆ. 6 ತಂಡಗಳಾದ್ಯಂತ 30 ಆಟಗಾರರನ್ನು ಒಳಗೊಂಡಿರುವ ಸ್ಪರ್ಧೆಯಲ್ಲಿ ಭಾರತವು ತನ್ನ ಅತಿದೊಡ್ಡ ತಂಡವನ್ನು ಹೊಂದಿದೆ.

ಕಳೆದ ತಿಂಗಳು 19 ರಂದು ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ಮೊಟ್ಟಮೊದಲ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಗೆ ಚಾಲನೆ ನೀಡಿದ್ದರು. ಟಾರ್ಚ್‌ ರಿಲೇ 40 ದಿನಗಳ ಕಾಲ ದೇಶದ 75 ಅಪ್ರತಿಮ ಸ್ಥಳಗಳಿಗೆ ಪ್ರಯಾಣಿಸಿತು, 20 ಸಾವಿರ ಕಿಲೋಮೀಟರ್‌ಗಳನ್ನು ಕ್ರಮಿಸಿತು ಮತ್ತು  ಮಹಾಬಲಿಪುರಂನಲ್ಲಿ ಕೊನೆಗೊಂಡಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top