News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಜಾದಿ ಕಾ ಅಮೃತ್‌ ಮಹೋತ್ಸವ: 12,000 ಅಡಿ ಎತ್ತರದಲ್ಲಿ ತಿರಂಗಾ ಹಾರಿಸಿದ ಐಟಿಬಿಪಿ ಯೋಧರು

ಲಡಾಖ್: 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರು  ಸಮುದ್ರದಿಂದ 12,000 ಅಡಿ ಎತ್ತರದಲ್ಲಿ ‘ತ್ರಿವರ್ಣ’ ಧ್ವಜ ಹಾರಿಸಿದ್ದಾರೆ. ಈ ಮೂಲಕ ಹರ್‌ ಘರ್‌ ತಿರಂಗಾ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರೂ ಮನೆಯಲ್ಲಿ ತಿರಂಗಾ ಹಾರಿಸುವಂತೆ ಸಂದೇಶ ನೀಡಿವೆ.

ಲಡಾಖ್‌ನ ಲೇಹ್‌ನಲ್ಲಿರುವ ವಾಯುವ್ಯ ಗಡಿಭಾಗದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಐಟಿಬಿಪಿ ಟ್ವಿಟರ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ವೀಡಿಯೊದಲ್ಲಿ  ‘ಭಾರತ್ ಮಾತಾ ಕಿ ಜೈ’ ಎಂದು ಕೂಗುವುದನ್ನು ಕಾಣಬಹುದು.

“ಭಾರತ್ ಮಾತಾ ಕಿ ಜೈ. ಐಟಿಬಿಪಿ ಪಡೆಗಳು ಲಡಾಖ್‌ನಲ್ಲಿ 12,000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜದೊಂದಿಗೆ ‘ಹರ್ ಘರ್ ತಿರಂಗಾ’ ಸಂದೇಶದೊಂದಿಗೆ ನಾಗರಿಕರನ್ನು ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಆಗಸ್ಟ್ 13 ರಿಂದ 15, 2022 ರ ನಡುವೆ ಮನೆಗಳಲ್ಲಿ ಪ್ರದರ್ಶಿಸಲು ಪ್ರೇರೇಪಿಸಿವೆ” ಎಂದು ಟ್ವಿಟ್‌ನಲ್ಲಿ ತಿಳಿಸಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top