News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2014 ರಿಂದ 7.22 ಲಕ್ಷ ಮಂದಿ ಕೇಂದ್ರ ಸರ್ಕಾರಿ ಇಲಾಖೆಯಲ್ಲಿ ಖಾಯಂ ಉದ್ಯೋಗ ಪಡೆದಿದ್ದಾರೆ

ನವದೆಹಲಿ: 2014 ರಿಂದ ಇಲ್ಲಿಯವರೆಗೆ ಒಟ್ಟು 7,22,311 ಮಂದಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಯಂ ಉದ್ಯೋಗ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

7, 22, 311 ಜನರಲ್ಲಿ ಒಟ್ಟು 1,30, 423 ಜನರು 2014-2015 ರಲ್ಲಿ ಸರ್ಕಾರಿ ಉದ್ಯೋಗ ಪಡೆದಿದ್ದಾರೆ. 2015-2016ರಲ್ಲಿ 1,11,807 ಜನರು ಉದ್ಯೋಗ ಪಡೆದುಕೊಂಡಿದ್ದಾರೆ. 2016-2017ರಲ್ಲಿ 1,01,333, 2017-2018ರಲ್ಲಿ 76,147, 2018-2019 ರಲ್ಲಿ 38,100, 2019-2020ರಲ್ಲಿ 1,47,096, 2020-2021ರಲ್ಲಿ 78,555 ಮತ್ತು 2021-2022ರಲ್ಲಿ 38,850 ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, ಉದ್ಯೋಗ ಸೃಷ್ಟಿ ಮತ್ತು ಉದ್ಯೋಗಾವಕಾಶವನ್ನು ಸುಧಾರಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಇದಲ್ಲದೆ, ಭಾರತ ಸರ್ಕಾರವು ದೇಶದಲ್ಲಿ ಉದ್ಯೋಗವನ್ನು ಸೃಷ್ಟಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಸಿಂಗ್ ಹೇಳಿದರು.

2021-22 ರ ಬಜೆಟ್ 2021-22 ರಿಂದ ಪ್ರಾರಂಭವಾಗುವ ಐದು ವರ್ಷಗಳ ಅವಧಿಗೆ 1.97 ಲಕ್ಷ ಕೋಟಿ ರೂ.ಗಳ ವೆಚ್ಚದೊಂದಿಗೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಗಳನ್ನು ಪ್ರಾರಂಭಿಸಿತು. ಸರ್ಕಾರ ಜಾರಿಗೊಳಿಸುತ್ತಿರುವ ಪಿಎಲ್‌ಐ ಯೋಜನೆಗಳು 60 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top