News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

38 ಟಿಎಂಸಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಮಿಥುನ್‌ ಚಕ್ರವರ್ತಿ

ಕೋಲ್ಕತ್ತಾ:  ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಮಿಥುನ್‌ ಚಕ್ರವರ್ತಿ ಅವರು 38 ಟಿಎಂಸಿ ಶಾಸಕರು ಬಿಜೆಪಿ ಪಾಳಯದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿದ್ದಾರೆ.

38 ಶಾಸಕರ ಪೈಕಿ 21 ಮಂದಿ ನೇರವಾಗಿ ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಕನಿಷ್ಠ 38 ಟಿಎಂಸಿ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರಲ್ಲಿ 21 ಮಂದಿ ನನ್ನೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದಾರೆ. ನಾನು ಮುಂಬೈನಲ್ಲಿದ್ದಾಗ ಒಂದು ದಿನ ಬೆಳಿಗ್ಗೆ ಶಿವಸೇನೆ ಮತ್ತು ಬಿಜೆಪಿ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚಿಸಿದೆ ಎಂಬ ಸುದ್ದಿಯನ್ನು ಓದಿದೆ” ಅವರು ಪತ್ರಿಕಾಗೋಷ್ಠಿಯಲ್ಲಿ ಮಾರ್ಮಿಕವಾಗಿ ನುಡಿದಿದ್ದಾರೆ.

18 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಮತ್ತು ಪಕ್ಷದ ಧ್ವಜವು ಇತರ ಕೆಲವು ರಾಜ್ಯಗಳಲ್ಲಿ ಶೀಘ್ರದಲ್ಲೇ ಎತ್ತರಕ್ಕೆ ಹಾರಲಿದೆ ಎಂದಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ,  ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ 216 ಶಾಸಕರನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 75 ಶಾಸಕರನ್ನು ಹೊಂದಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top