News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೆ.15 ರವರೆಗೆ ʼಪದ್ಮ ಪ್ರಶಸ್ತಿ-2023ʼಗೆ ನಾಮನಿರ್ದೇಶನ ಮಾಡಲು ಅವಕಾಶ

ನವದೆಹಲಿ: ಪದ್ಮ ಪ್ರಶಸ್ತಿಗಳು-2023ಗೆ  ನಾಮನಿರ್ದೇಶನಗಳು ಈ ವರ್ಷ ಸೆಪ್ಟೆಂಬರ್ 15 ರವರೆಗೆ ತೆರೆದಿರುತ್ತವೆ. ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿದ್ದು, ಜನರೇ ಸಾಧಕರ ಹೆಸರನ್ನು ಈ ಪ್ರಶಸ್ತಿಗಾಗಿ ನಾಮನಿರ್ದೇಶನ ಮಾಡಬಹುದು.

ಪದ್ಮ ಪ್ರಶಸ್ತಿಗಳು-2023 ಗಾಗಿ ಆನ್‌ಲೈನ್ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಮೇ 1 ರಂದು ತೆರೆಯಲಾಗಿದ್ದು, ಇದನ್ನು ಮುಂದಿನ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ಈ ಪ್ರಶಸ್ತಿಯು ವಿಶಿಷ್ಟವಾದ ಸೇವೆಯನ್ನು ಗುರುತಿಸಿ ಗೌರವಿಸುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಉದ್ಯಮದ ಎಲ್ಲಾ ಕ್ಷೇತ್ರಗಳಲ್ಲಿ ಮಾಡಿದ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಯನ್ನು ಪುರಸ್ಕರಿಸಲು ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ಇದನ್ನು ನೀಡಲಾಗುತ್ತದೆ.

ಜನಾಂಗ, ಉದ್ಯೋಗ, ಹುದ್ದೆ ಅಥವಾ ಲಿಂಗದ ಭೇದವಿಲ್ಲದ ಎಲ್ಲ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು ಎಂದು ಸಚಿವಾಲಯ ಹೇಳುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top