News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

24,680 ಹಳ್ಳಿಗಳಲ್ಲಿ 4G ಮೊಬೈಲ್ ಸೇವೆ ಒದಗಿಸುವ ಯೋಜನೆಗೆ ಕೇಂದ್ರ ಅಸ್ತು

ನವದೆಹಲಿ: ಕೇಂದ್ರ ಸಚಿವ ಸಂಪುಟವು ಒಟ್ಟು 26,316 ಕೋಟಿ ರೂಪಾಯಿ ವೆಚ್ಚದಲ್ಲಿ 4G ಮೊಬೈಲ್ ಸೇವೆಗಳ ಯೋಜನೆಗೆ ಅನುಮೋದನೆ ನೀಡಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ನಂತರ ನವದೆಹಲಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಈ ಯೋಜನೆಯು ದೂರದ ಮತ್ತು ಕಷ್ಟಕರ ಪ್ರದೇಶಗಳಲ್ಲಿನ 24,680 ಹಳ್ಳಿಗಳಲ್ಲಿ 4G ಮೊಬೈಲ್ ಸೇವೆಗಳನ್ನು ಒದಗಿಸುತ್ತದೆ ಎಂದಿದ್ದಾರೆ.

ಇದಲ್ಲದೆ, ಕೇವಲ 2ಜಿ ಮತ್ತು 3ಜಿ ಸಂಪರ್ಕ ಹೊಂದಿರುವ 6, 279 ಗ್ರಾಮಗಳನ್ನು 4ಜಿಗೆ ಮೇಲ್ದರ್ಜೆಗೇರಿಸಲಾಗುವುದು ಎಂದಿದ್ದಾರೆ. ಆತ್ಮನಿರ್ಭರ ಭಾರತದ 4G ತಂತ್ರಜ್ಞಾನದ ಸ್ಟಾಕ್ ಅನ್ನು ಬಳಸಿಕೊಂಡು BSNL ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತದೆ ಮತ್ತು ಯೂನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ ಮೂಲಕ ಹಣವನ್ನು ನೀಡಲಾಗುತ್ತದೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಒದಗಿಸುವ ಸರ್ಕಾರದ ಗುರಿ ಸಾಧನೆಗೆ ಈ ಯೋಜನೆಯು ಮಹತ್ವದ ಹೆಜ್ಜೆಯಾಗಿದೆ ಎಂದ ಸಚಿವರು,. ಈ ಯೋಜನೆಯು ಮೊಬೈಲ್ ಬ್ರಾಡ್‌ಬ್ಯಾಂಡ್ ಮೂಲಕ ವಿವಿಧ ಇ-ಆಡಳಿತ ಸೇವೆಗಳು, ಬ್ಯಾಂಕಿಂಗ್ ಸೇವೆಗಳು, ಟೆಲಿ-ಮೆಡಿಸಿನ್, ಟೆಲಿ-ಶಿಕ್ಷಣ ಇತ್ಯಾದಿಗಳ ವಿತರಣೆಯನ್ನು ಉತ್ತೇಜಿಸುತ್ತದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ಸೇರ್ಪಡೆ ಮತ್ತು ಎಲ್ಲರಿಗೂ ಸಂಪರ್ಕವು ಸರ್ಕಾರದ ಅಂತ್ಯೋದಯ ದೃಷ್ಟಿಯ ಅವಿಭಾಜ್ಯ ಅಂಗವಾಗಿದೆ. ಐದು ರಾಜ್ಯಗಳಾದ್ಯಂತ 44 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ೭,287 ವ್ಯಾಪ್ತಿಗೆ ಒಳಪಡದ ಹಳ್ಳಿಗಳಲ್ಲಿ 4G ಮೊಬೈಲ್ ಸೇವೆಗಳನ್ನು ಒದಗಿಸುವ ಯೋಜನೆಗೆ ಕಳೆದ ವರ್ಷ ಸರ್ಕಾರ ಅನುಮೋದನೆ ನೀಡಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top