News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂದಿನಿಂದ ಕಾಮನ್‌ವೆಲ್ತ್ ಗೇಮ್ಸ್‌ ಆರಂಭ

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್ 2022 ಇಂದು ಯುಕೆಯಲ್ಲಿ ಆರಂಭವಾಗಲಿದೆ. 12 ದಿನಗಳ ಕ್ರೀಡಾಕೂಡದ ಉದ್ಘಾಟನಾ ಸಮಾರಂಭವು ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ರಾತ್ರಿ 11:30 ಕ್ಕೆ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

72 ದೇಶಗಳ 5,000 ಕ್ಕೂ ಹೆಚ್ಚು ಕ್ರೀಡಾಪಟುಗಳು 19 ಕ್ರೀಡೆಗಳಲ್ಲಿ 280 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

215 ಸದಸ್ಯರ ತಂಡವನ್ನು ಕಳುಹಿಸಿರುವ ಭಾರತ 16 ಸ್ಪರ್ಧೆಗಳಲ್ಲಿ ಭಾಗವಹಿಸಲಿದೆ. ಭಾರತದ ಖ್ಯಾತ ಷಟ್ಲರ್ ಪಿವಿ ಸಿಂಧು ಧ್ವಜದಾರಿಯಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಇತ್ತೀಚಿಗಷ್ಟೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ  ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿ ಶುಭ ಹಾರೈಸಿದ್ದರು ಮತ್ತು ಅವರಲ್ಲಿ ಆತ್ಮವಿಶ್ವಾಸ ಇಮ್ಮಡಿಗೊಳಿಸುವ ಸ್ಪೂರ್ತಿದಾಯಕ ಮಾತುಗಳನ್ನಾಡಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top