ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.
ಝಕೀರ್ ಮತ್ತು ಮಹಮ್ಮದ್ ಶಫಿಕ್ ಎಂಬವರನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದೆ.
ಆರೋಪಿಗಳಲ್ಲಿ ಶಫಿಕ್ ಬೆಳ್ಳಾರೆ ಮತ್ತು ಝಕೀರ್ ಸವಣೂರು ನಿವಾಸಿ ಎನ್ನಲಾಗಿದೆ. ಝಕೀರ್ ಮೇಲೆ ಈ ಹಿಂದೆ ಒಂದು ಕ್ರಿಮಿನಲ್ ಕೇಸ್ ದಾಖಲಾಗಿತ್ತು ಎನ್ನಲಾಗಿದೆ.
ಈ ಇಬ್ಬರ ಸಂಘಟನೆ ಹಿನ್ನೆಲೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣದ ಬಗ್ಗೆ, ಇನ್ನೂ ಯಾರಾದರೂ ಇದ್ದಾರಯೇ ಎಂಬ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಕಾನೂನು ಸುವ್ಯಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ತನಿಖೆಯು ಪ್ರಗತಿಯಲ್ಲಿದ್ದು,ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಹತ್ಯೆಗೆ ಸಂಬಂಧಿಸಿದಂತೆ ಕರಾವಳಿ ಭಾಗದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಸರ್ಕಾರ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.