News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

17 ವರ್ಷ ತುಂಬಿದ ಬಳಿಕ ಮತದಾರರ ಪಟ್ಟಿಗೆ ಸೇರಲು ಅರ್ಜಿ ಸಲ್ಲಿಸಬಹುದು

ನವದೆಹಲಿ: 17 ವರ್ಷಕ್ಕಿಂತ ಮೇಲ್ಪಟ್ಟ ಯುವಕ ಯುವತಿಯರಿಗೆ ಚುನಾವಣಾ ಆಯೋಗ ಮಹತ್ವದ ಸುದ್ದಿಯೊಂದನ್ನು ನೀಡಿದೆ. 17 ವರ್ಷ ಕಳೆದ ಬಳಿಕ ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಮತದಾರರ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಕೆಗೆ 18 ವರ್ಷ ಪೂರ್ಣಗೊಳ್ಳುವುದನ್ನು ಕಾಯಬೇಕಾಗಿಲ್ಲ. 17 ವರ್ಷ ಕಳೆದ ಬಳಿಕ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ  ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಸಿಇಒಗಳು/ಇಆರ್‌ಒಗಳು/ಎಇಆರ್‌ಒಗಳಿಗೆ ಈ ಕುರಿತು ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದೆ.

ಅಲ್ಲದೇ, ಯುವ ಜನತೆ ತಮ್ಮ ಮುಂಗಡ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಹಾಗೂ ಮಾಹಿತಿ ನೀಡಲು ಸೂಚಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top