News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಗತ್ಯಬಿದ್ದರೆ ಯೋಗಿ ಆದಿತ್ಯನಾಥ್‌ ಮಾದರಿ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರ್‌ ಅವರ ಹತ್ಯೆಗೈದ ಬಳಿಕ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿರುವ ಆಕ್ರೋಶಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಗತ್ಯಬಿದ್ದರೆ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಮಾದರಿಯನ್ನು ಅನುಸರಿಸುವುದಾಗಿ ಹೇಳಿದ್ದಾರೆ.

“ಕರ್ನಾಟಕದಲ್ಲಿ ನಾವು ಕೋಮುವಾದಿ ಶಕ್ತಿಗಳನ್ನು ಎದುರಿಸಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿದ್ದೇವೆ. ಪರಿಸ್ಥಿತಿ ಎದುರಾದರೆ, ಯೋಗಿ ಮಾದರಿಯನ್ನು ಇಲ್ಲಿಯೂ ಜಾರಿಗೆ ತರಲಾಗುವುದು” ಎಂದು ಅವರು ಸುದ್ದಿಗಾರರೊಂದಿಗೆ ಹೇಳಿದ್ದಾರೆ.

“ಉತ್ತರ ಪ್ರದೇಶದ ಪರಿಸ್ಥಿತಿಯನ್ನು ಪರಿಗಣಿಸಿದರೆ ರಾಜ್ಯವನ್ನು ನಿರ್ವಹಿಸಲು ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸೂಕ್ತ ವ್ಯಕ್ತಿ” ಎಂದು ಹೇಳಿದ್ದಾರೆ.

“ಈ ಹತ್ಯೆಯ ನಂತರ ನಮ್ಮ ಹೃದಯದಲ್ಲಿ ಕೋಪವಿದೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ನಂತರ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿರುವುದು ನನಗೆ ನೋವುಂಟುಮಾಡಿದೆ” ಎಂದು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top