News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೇಕಾರರು, ಟ್ಯಾಕ್ಸಿ ಚಾಲಕರು, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ವಿದ್ಯಾನಿಧಿ ಯೋಜನೆಯನ್ನು ನೇಕಾರರು, ಟ್ಯಾಕ್ಸಿ ಚಾಲಕರು ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ರೈತ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು, ಅದನ್ನೀಗ ವಿಸ್ತರಣೆ ಮಾಡುತ್ತಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10ರಿಂದ 12 ಸಾವಿರ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ದೊರಕಲಿದೆ. ಟ್ಯಾಕ್ಸಿ ಚಾಲಕರ ಸುಮಾರು 50 ಸಾವಿರ ಮಕ್ಕಳಿಗೆ ಇದರ ಪ್ರಯೋಜನ ಸಿಗಲಿದೆ. ಅದರಂತೆ ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯಿಂದ ಪ್ರಯೋಜನ ಸಿಗಲಿದೆ” ಎಂದಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದಲ್ಲಿ ಆರಂಭಿಸಲಾಗಿದೆ. ಈ ಯೋಜನೆಯಿಂದ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗಿದೆ. 15 ರಿಂದ 20 ಸಾವಿರ ವಿದ್ಯಾರ್ಥಿಗಳಿಗೆ ಡಿ ಬಿ ಟಿ ಮೂಲಕ ಹಣ ಪಾವತಿಸಲಾಗುತ್ತಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top