News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅದ್ಧೂರಿ ಸಮಾರಂಭದೊಂದಿಗೆ ಕಾಮನ್ವೆಲ್ತ್‌ ಗೇಮ್ಸ್‌ ಆರಂಭ

ನವದೆಹಲಿ: ಯುಕೆಯ ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ 22ನೇ ಆವೃತ್ತಿಯ ಕಾಮನ್‌ವೆಲ್ತ್ ಗೇಮ್ಸ್ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ಜರುಗಿದೆ. ಒಟ್ಟು 2,000 ಪ್ರದರ್ಶಕರು ಬರ್ಮಿಂಗ್ಹ್ಯಾಮ್‌ನ ಇತಿಹಾಸದ ಕಥೆಯನ್ನು ಸೊಗಸಾಗಿ ಅನಾವರಣಗೊಳಿಸಿದ್ದಾರೆ.

ಪರೇಡ್‌ನಲ್ಲಿ ಒಟ್ಟು 72 ತಂಡಗಳು ಭಾಗವಹಿಸಿದ್ದವು. ಕಾಮನ್‌ವೆಲ್ತ್ ಗೇಮ್ಸ್ ಉದ್ಘಾಟನಾ ಸಮಾರಂಭದ ಪರೇಡ್‌ನಲ್ಲಿ ಪಿವಿ ಸಿಂಧು ಮತ್ತು ಮನ್‌ಪ್ರೀತ್ ಸಿಂಗ್ ಭಾರತದ ಧ್ವಜಧಾರಿಗಳಾಗಿದ್ದರು.

ಈ ಕ್ರೀಡಾ ಸಂಭ್ರಮದಲ್ಲಿ ಒಟ್ಟು 54 ರಾಷ್ಟ್ರಗಳು ಭಾಗವಹಿಸುತ್ತಿದ್ದು, 280 ಪದಕ ಸ್ಪರ್ಧೆಗಳಲ್ಲಿ 6,500 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಕಾರ್ಯಕ್ರಮವು ಆಗಸ್ಟ್ 8 ರವರೆಗೆ ನಡೆಯಲಿದೆ.

111 ಪುರುಷ ಆಟಗಾರರು ಮತ್ತು 104 ಮಹಿಳಾ ಆಟಗಾರರನ್ನು ಒಳಗೊಂಡ 215 ಸದಸ್ಯರ ಭಾರತೀಯ ತಂಡವು ಬರ್ಮಿಂಗ್ಹ್ಯಾಮ್‌ನಲ್ಲಿ 15 ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top