News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ಮೃತಿ ಮಗಳ ವಿರುದ್ಧ ಆರೋಪ: ಟ್ವಿಟ್‌ ಡಿಲೀಟ್‌ ಮಾಡಲು ಕಾಂಗ್ರೆಸ್ಸಿಗರಿಗೆ ಹೈಕೋರ್ಟ್‌ ಆದೇಶ

ನವದೆಹಲಿ: ಗೋವಾದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಅಕ್ರಮ ಬಾರ್‌ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ಸಿಗರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆರೋಪಿಸಿ ಮಾಡಿರುವ ಎಲ್ಲಾ ಟ್ವಿಟ್‌ಗಳನ್ನು ಅಳಿಸಿ ಹಾಕುವಂತೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

24 ಗಂಟೆಗಳೊಳಗೆ ಟ್ವಿಟ್‌ ಅನ್ನು ಡಿಲೀಟ್‌ ಮಾಡುವಂತೆ ಜೈರಾಮ್‌ ರಮೇಶ್‌, ಪ್ರವೀಣ್‌ ಖೇರ, ನೆಟ್ಟ ಡಿಸೋಜ ಅವರಿಗೆ ನ್ಯಾಯಾಲಯ ಸೂಚನೆ ನೀಡಿದೆ.

ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ನಾಯಕರಿಗೆ ಸಮನ್ಸ್ ನೀಡಿತ್ತು. ಸ್ಮೃತಿ ಇರಾನಿ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರು ತಮ್ಮ ಟ್ವೀಟ್‌ಗಳನ್ನು ಅಳಿಸಿ ಆಗಸ್ಟ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್‌ ನಾಯಕರು ಟ್ವಿಟ್‌ ಡಿಲೀಟ್ ಮಾಡಲು ವಿಫಲರಾದರೆ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮ ಕಂಪನಿ  ತೆಗೆದುಹಾಕಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ.

“ಸ್ಮೃತಿ ಇರಾನಿ ಅವರು ದಾಖಲಿಸಿರುವ ಪ್ರಕರಣಕ್ಕೆ ಔಪಚಾರಿಕವಾಗಿ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ನಮಗೆ ನೋಟಿಸ್ ನೀಡಿದೆ. ನ್ಯಾಯಾಲಯದ ಮುಂದೆ ಸತ್ಯವನ್ನು ಪ್ರಸ್ತುತಪಡಿಸಲು ನಾವು ಎದುರು ನೋಡುತ್ತೇವೆ. ಇರಾನಿ ಅವರ ವಾದವನ್ನು ನಾವು ಪ್ರಶ್ನಿಸುತ್ತೇವೆ” ಎಂದುಕೋರ್ಟ್ ಆದೇಶದ ನಂತರ ಜೈರಾಮ್‌ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾಳೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ ವಾರ ಇರಾನಿ ಅವರು ಮೂವರು ಕಾಂಗ್ರೆಸ್ ನಾಯಕರು ಮತ್ತು ಅವರ ಪಕ್ಷಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಅವರು ಲಿಖಿತ ಬೇಷರತ್ ಕ್ಷಮೆಯಾಚಿಸಲು ಮತ್ತು ತಮ್ಮ ಮಗಳ ಮೇಲಿನ ಆರೋಪಗಳನ್ನು ತಕ್ಷಣವೇ ಹಿಂಪಡೆಯುವಂತೆ ಕೋರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top