News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ

ಬೆಂಗಳೂರು: ಕರಾವಳಿ ಕರ್ನಾಟದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲವನ್ನು ಸೃಷ್ಟಿ ಮಾಡಿರುವ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎಗೆ ಹಸ್ತಾಂತರ ಮಾಡಿದೆ.

ಈ ಬಗ್ಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

“ಪ್ರವೀಣ್ ಹತ್ಯೆ ಸಂಘಟಿತ ಅಪರಾಧ ಎಂಬ ಶಂಕೆ ಇದೆ. ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನು ಸಂಗ್ರಹಿಸಲು ಹೇಳಿದ್ದೇನೆ. ತನಿಖೆ ಪ್ರಗತಿಯಲ್ಲಿದ್ದು, ಎಲ್ಲ ಮಾಹಿತಿ ಪಡೆದ ಮೇಲೆ  ಎನ್​​ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ” ಎಂದು ಬೊಮ್ಮಾಯಿ ತಿಳಿಸಿದ್ಧಾರೆ.

ಪ್ರವೀಣ್‌ ಹಂತಕರು ಕೇರಳದಿಂದ ಬಂದಿರುವ ಬಗ್ಗೆ ಪೊಲೀಸರು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಸ್ತೃತ ತನಿಖೆಗಾಗಿ ಎನ್‌ಐಎಗೆ ವಹಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top