News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಅಮಿತ್‌ ಶಾ

ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೇಂದ್ರ ಸಚಿವರಾದ ಅಮಿತ್‌ ಶಾ ಅವರು ಭೇಟಿ ಮಾಡಿದರು. ಮಾತ್ರವಲ್ಲದೇ ಸ್ಮೃತಿ ಇರಾನಿ ಕೂಡ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಶಾ ರಾಷ್ಟ್ರಪತಿ ಭವನಕ್ಕೆ ತೆರಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಒಬ್ಬರಾದ ಬಳಿಕ ಒಬ್ಬರಂತೆ ಕೇಂದ್ರ ಸಚಿವರುಗಳು ಮುರ್ಮು ಅವರನ್ನು ಭೇಟಿಯಾಗುತ್ತಿದ್ದಾರೆ. ಇಂದು ಕೂಡ ಹಲವು ಗಣ್ಯರು ಅವರನ್ನು ಭೇಟಿಯಾಗಿದ್ದು, ಅವರಲ್ಲಿ ಶಾ ಮತ್ತು ಇರಾನಿ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಕಾನೂನು ಸಚಿವ ಕಿರಣ್ ರಿಜಿಜು ಮತ್ತು ಎಸ್.ಪಿ ಸಿಂಗ್ ಬಘೇಲ್ ಅವರು ರಾಷ್ಟ್ರಪತಿಯನ್ನು ಭೇಟಿಯಾದರು.

ಮೊನ್ನೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು  ಜಿತೇಂದ್ರ ಸಿಂಗ್ ಮುರ್ಮು ಅವರನ್ನು ಭೇಟಿಯಾದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top