News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಲ್ಲಿ ಈಗ ಚುನಾವಣೆ ನಡೆದರೆ ಎನ್‌ಡಿಎಗೆ ಸಿಗಲಿದೆ 362 ಸ್ಥಾನ

ನವದೆಹಲಿ: ದೇಶದಲ್ಲಿ ಈ ತಕ್ಷಣ ಲೋಕಸಭಾ ಚುನಾವಣೆ ನಡೆದರೆ ಮತ್ತೊಮ್ಮೆ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವವಾದ ವಿಜಯವನ್ನು ಸಾಧಿಸಲಿದೆ ಎಂದು ಇಂಡಿಯಾ ಟಿವಿ ನಡೆಸಿದ ‘ವಾಯ್ಸ್ ಆಫ್ ದಿ ನೇಷನ್’ ಸಮೀಕ್ಷೆ ತಿಳಿಸಿದೆ.

ಸಮೀಕ್ಷೆಯ ಪ್ರಕಾರ, ಈಗ ದೇಶದಲ್ಲಿ ಚುನಾವಣೆ ನಡೆದರೆ ಎನ್‌ಡಿಎ 362 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನು ಏರಲಿದೆ. ಯುಪಿಎ ಮೈತ್ರಿ ಕೂಟ ಕೇವಲ 91 ಸ್ಥಾನಗಳನ್ನು ಪಡೆಯಲಿದೆ. ಪ್ರಾದೇಶಿಕ ಮತ್ತು ಪಕ್ಷೇತರ ಅಭ್ಯರ್ಥಿಗಳು 84 ಸ್ಥಾನಗಳನ್ನು ಪಡೆಯಲಿದ್ದಾರೆ.

ಈ ಸಮೀಕ್ಷೆಯನ್ನು ಜುಲೈ 11 ರಿಂದ 24ರ ನಡುವೆ  ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 136 ಲೋಕಸಭಾ ಕ್ಷೇತ್ರಗಳ 34,000 ಜನರನ್ನು ಸಂಪರ್ಕಿಸಿ ನಡೆಸಲಾಗಿದೆ.

ಸಮೀಕ್ಷೆ ಪ್ರಕಾರ ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 23ರಲ್ಲಿ ಬಿಜೆಪಿ ಜಯಗಳಿಸಲಿದೆ. ಕಾಂಗ್ರೆಸ್ ನಾಲ್ಕು ಮತ್ತು ಜೆಡಿಎಸ್ ಒಂದು ಸ್ಥಾನಗಳನ್ನು ಪಡೆಯಲಿದೆ.

ಉತ್ತರ ಪ್ರದೇಶದಲ್ಲಿನ 80 ಲೋಕಸಭಾ ಸ್ಥಾನಗಳ ಪೈಕಿ 76 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎ ವಿಜಯ ಸಾಧಿಸಲಿದೆ. ಯುಪಿಎ ಕೇವಲ 2 ಸ್ಥಾನಗಳನ್ನು ಮತ್ತು ಇತರರು ಎರಡು ಸ್ಥಾನಗಳನ್ನು ಪಡೆಯಲಿದ್ದಾರೆ.

ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಎನ್‌ಡಿಎ 37 ಸ್ಥಾನಗಳನ್ನು ಮತ್ತು ವಿರೋಧ ಪಕ್ಷಗಳು 11 ಸ್ಥಾನಗಳನ್ನು ಪಡೆಯಲಿದೆ.

ಗುಜರಾತಿನಲ್ಲಿ ಎಲ್ಲಾ 26 ಸ್ಥಾನಗಳನ್ನು ಎನ್‌ಡಿಎ ಜಯಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top