News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರಪತಿಗೆ ಕ್ಷಮೆಯಾಚಿಸಿ ಪತ್ರ ಬರೆದ ಅಧೀರ್‌ ರಂಜನ್‌ ಚೌಧುರಿ

ನವದೆಹಲಿ: ದೇಶದ ಪ್ರಥಮ ಮಹಿಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರ ಪತ್ನಿ ಎಂದು ಕರೆಯುವ ಮೂಲಕ ಅವಮಾನ ಮಾಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಕೊನೆಗೂ ಕ್ಷಮೆಯಾಚನೆ ಮಾಡಿದ್ದಾರೆ.

ಚೌಧುರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು, “ನೀವು ಅಲಂಕರಿಸಿರುವ ಹುದ್ದೆಯನ್ನು ವಿವರಿಸಲು ತಪ್ಪಾದ ಪದಗಳನ್ನು ಬಳಸಿರುವುದಕ್ಕೆ ವಿಷಾದಿಸುತ್ತೇನೆ” ಎಂದಿದ್ದಾರೆ.

“ಬಾಯಿ ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದೇನೆ. ಇದಕ್ಕಾಗಿ ನಾನು ಕ್ಷಮೆಯನ್ನು ಕೋರುತ್ತೇನೆ ಹಾಗೂ ನನ್ನ ಕ್ಷಮೆಯನ್ನು ನೀವು ಸ್ವೀಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.

ರಾಷ್ಟ್ರ ಪತ್ನಿ ಎಂದು ಕರೆಯುವ ಮೂಲಕ ರಾಷ್ಟ್ರಪತಿಗೆ ಅವಮಾನ ಮಾಡಿದ ಚೌಧುರಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿಗೊಳಿಸಿದೆ ಮತ್ತು ಆಗಸ್ಟ್ 1ರಂದು ಈ ಬಗ್ಗೆ ವಿವರಣೆಯನ್ನು ನೀಡಲು ಆಯೋಗದ ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಸಂಸತ್ತಿನಲ್ಲೂ ಚೌಧರಿ ಅವರು ನೀಡಿದ ಹೇಳಿಕೆ ಬಗ್ಗೆ ದೊಡ್ಡ ಮಟ್ಟದಲ್ಲಿ ಆಕ್ರೋಶಗಳು ವ್ಯಕ್ತವಾಗಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top