News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆ.1ರಿಂದ ವೋಟರ್‌ ಐಡಿಗೆ ಆಧಾರ್ ಲಿಂಕ್ ಮಾಡುವ ವ್ಯವಸ್ಥೆ ಜಾರಿಗೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವ ವ್ಯವಸ್ಥೆ ನಾಳೆಯಿಂದ ಜಾರಿಗೆ ಬರುತ್ತಿದೆ. ಆದರೆ ಇದು ಕಡ್ಡಾಯವಲ್ಲ. ಮತದಾರರು ಇಚ್ಚಿಸಿದರೆ ಮಾತ್ರ ತಮ್ಮ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಬಹುದು.

“ವೋಟರ್ ಐಡಿ ಜೊತೆಗೆ ಆಧಾರ್ ಲಿಂಕ್ ಮಾಡುವ ವ್ಯವಸ್ಥೆ ಆಗಸ್ಟ್ 1ರಿಂದ ಜಾರಿಗೆ ಬರುತ್ತಿದೆ. ಆದರೆ ಇದು ಕಡ್ಡಾಯವಲ್ಲ. ಮತದಾರರ ಪಟ್ಟಿಯಲ್ಲಿ ಇರುವ ನಕಲಿ ಮತದಾರರನ್ನು ಹೊರಗಿಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಒಬ್ಬ ವ್ಯಕ್ತಿ ಎರಡು ಕಡೆ ಮತದಾರರ ಚೀಟಿ ಹೊಂದಿರುವುದನ್ನು ಪತ್ತೆ ಹಚ್ಚಲು ಈ ಕ್ರಮ ಸಹಾಯಕವಾಗಲಿದೆ. ಆಧಾರ್ ಲಿಂಕ್ ಆದರೆ ಒಬ್ಬ ವ್ಯಕ್ತಿ ಒಂದು ಕಡೆ ಮಾತ್ರ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಸ್ವತಃ ನಾವೇ ನಮ್ಮ ವೋಟರ್ ಐಡಿಯನ್ನು ಆಧಾರ್‌ಗೆ ಲಿಂಕ್ ಮಾಡಬಹುದು.

https://voter portal.eci.gov.in/ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಮೊಬೈಲ್ ಸಂಖ್ಯೆ ಇಮೇಲ್ ಐಡಿ, ವೋಟರ್ ಐಡಿ ಮೂಲಕ ಲಾಗಿನ್ ಆಗಬೇಕು ಮತ್ತು ಪಾಸ್‌ವರ್ಡ್ ರೂಪಿಸಬೇಕು.

ಬಳಿಕ ನಮ್ಮ ಹೆಸರು, ಹುಟ್ಟಿದ ದಿನಾಂಕ, ತಂದೆಯ ಹೆಸರು, ಜಿಲ್ಲೆ, ರಾಜ್ಯ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ನಮೂದಿಸಬೇಕು. ಈ ವಿವರಗಳು ತಾಳೆಯಾಗದಿದ್ದರೆ ಶೋಧ ಬಟನ್ ಕ್ಲಿಕ್ ಮಾಡಬೇಕು. ಸ್ಕ್ರೀನ್‌ನ ಎಡಭಾಗದಲ್ಲಿ ಇರುವ ಆಧಾರ್ ಸಂಖ್ಯೆ ನಮೂದಿಸುವ ಸ್ಥಳವನ್ನು ಆಯ್ಕೆ ಮಾಡಬೇಕು. ಆಧಾರ್ ಸಂಖ್ಯೆ, ವೋಟರ್ ಐಡಿ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಬೇಕು. ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಸಬ್ಮಿಟ್ ಬಟನ್ ಒತ್ತಬೇಕು.

ಎಸ್‌ಎಂಎಸ್ ಮೂಲಕ ವೋಟರ್ ಐಡಿ ಮತ್ತು ಆಧಾರ್ ಅನ್ನು ಲಿಂಕ್ ಮಾಡಬಹುದು.

166 ಅಥವಾ 51969ಕ್ಕೆ ECILINK<SAPCE><EPICNO><SPACE>ADHAR NO> ಹಾಕಿ ಮೆಸೇಜ್ ಕಳುಹಿಸಬೇಕು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top