News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಲಷ್ಕರ್‌ ಉಗ್ರರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ  ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಭಯೋತ್ಪಾದಕರು ಬಂಧಿಸಲ್ಪಟ್ಟಿದ್ದಾರೆ.

ಜಂಟಿ ಕಾರ್ಯಾಚರಣೆಯನ್ನು ನಡೆಸಿದ ಕುಪ್ವಾರ ಪೊಲೀಸರು ಮತ್ತು ಸೇನೆಯ 28 ರಾಷ್ಟ್ರೀಯ ರೈಫಲ್ಸ್ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಕುಪ್ವಾರದ ಲಾಡರ್ವಾನ್‌ನ ತಾಲಿಬ್ ಅಹ್ಮದ್ ಶೇಖ್ ಮತ್ತು ಕವಾಡಿ ಲಾಡರ್ವಾನ್‌ನ ಶಮೀಮ್ ಅಹ್ಮದ್ ಬಂಧಿತ ಉಗ್ರರು.

ಬಂಧಿತ ಉಗ್ರರಿಂದ ನಾಲ್ಕು ಪಿಸ್ತೂಲ್‌ಗಳು, ಎಂಟು ಪಿಸ್ತೂಲ್ ಮ್ಯಾಗಜೀನ್‌ಗಳು, 130 ಪಿಸ್ತೂಲ್ ರೌಂಡ್‌ಗಳು ಮತ್ತು 10 ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಲ್ಪೋರಾ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲು ತನಿಖೆಯನ್ನು ಕೈಗೊಳ್ಳಲಾಗಿದೆ.

ಈ ನಡುವೆ, ಇಂದು ಬೆಳ್ಳಂಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ.  ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top