News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀಲಂಕಾ: ಗೊಟಬಯ ಮನೆಯಲ್ಲಿ ಪತ್ತೆಯಾಗಿದ್ದ ಹಣ ಕೋರ್ಟ್‌ಗೆ ಸಲ್ಲಿಕೆ

ಕೊಲಂಬೋ: ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಯಲ್ಲಿ ಪತ್ತೆಯಾಗಿದ್ದ ಅಪಾರ ಪ್ರಮಾಣದ ಹಣವನ್ನು ಶ್ರೀಲಂಕಾ ಪೊಲೀಸರು ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಜುಲೈ 9ರಂದು ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಿದ್ದ ಜನರು ಭಾರಿ ಬಿಗಿ ಭದ್ರತೆಯನ್ನು ಮುರಿದು ಗೊಟಬಯ ಅವರ ಮನೆಗೆ ನುಗ್ಗಿದ್ದರು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಅಪಾರ ಪ್ರಮಾಣದ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದವು.

ಪ್ರತಿಭಟನಾಕಾರರು ಮನೆಗೆ ನುಗ್ಗುವ ಮುನ್ನವೇ ಗೊಂಬೆಯ ಅವರು ಸಿಂಗಾಪುರಕ್ಕೆ ಪಲಾಯನ ಮಾಡಿದ್ದರು.

ಇದೀಗ ಕೊಲಂಬೋ ಕೇಂದ್ರ ಅಪರಾಧ ದಳದ ಪೊಲೀಸ್ ವರಿಷ್ಠಾಧಿಕಾರಿ ಹಣವನ್ನು ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಆದರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಣವನ್ನು ನ್ಯಾಯಾಲಯಕ್ಕೆ ನೀಡುವಲ್ಲಿ ವಿಳಂಬ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top