News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

CWG: ಬಂಗಾರ ಜಯಿಸಿದ ಮೀರಾಬಾಯಿ ಚಾನು, ಬಿಂದ್ಯಾರಾಣಿಗೆ ಬೆಳ್ಳಿ

ನವದೆಹಲಿ: 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮೊದಲ ಬಂಗಾರದ ಪದಕವನ್ನು ಜಯಿಸಿದೆ. ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರು ಮಹಿಳೆಯರ 49 ಸ್ಪರ್ಧೆಯಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು ಪಡೆದರು.

ಸ್ನ್ಯಾಚ್ ಮತ್ತು ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಚಾನು ಒಟ್ಟು 201 ಕೆಜಿ ಭಾರ ಎತ್ತಿದರು.

ಮಹಿಳೆಯರ 55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬಿಂದ್ಯಾರಾಣಿ ದೇವಿ ಸೊರೊಖೈಬಾಮ್ ಬೆಳ್ಳಿ ಪದಕ ಗೆದ್ದಿದ್ದಾರೆ. ಬಿಂದ್ಯಾರಾಣಿ ಸ್ನ್ಯಾಚ್ ಮತ್ತು ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಒಟ್ಟು 202 ಕೆ.ಜಿ. ಭಾರವನ್ನು ಎತ್ತಿದ್ದಾರೆ.

ನಿನ್ನೆ ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಪುರುಷರ 61 ಕೆಜಿ ವಿಭಾಗದ ಫೈನಲ್‌ನಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕ ಪಡೆದರು. ಗುರುರಾಜ ಒಟ್ಟು 269 ಕೆಜಿ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು.

ಇಲ್ಲಿಯವರೆಗೆ, ಭಾರತವು CWG 2022 ರಲ್ಲಿ ನಾಲ್ಕು ಪದಕಗಳನ್ನು ಗೆದ್ದಿದೆ. ಈ ಎಲ್ಲಾ ಪದಕಗಳು ವೇಟ್‌ಲಿಫ್ಟಿಂಗ್‌ನಿಂದಲೇ ಬಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top