News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಶ್ಲಾಘಿಸಿದ ಮೋದಿ

ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವವು ಜನಾಂದೋಲನದ ಸ್ವರೂಪ ಪಡೆದುಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ರೇಡಿಯೊದಲ್ಲಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ, ಸಮಾಜದ ಎಲ್ಲಾ ವರ್ಗದ ಜನರು ಆಜಾದಿ ಕಾ ಅಮೃತ್‌ ಮಹೋತ್ಸವಕ್ಕೆ ಸಂಪರ್ಕ ಹೊಂದಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಮನ್ ಕಿ ಬಾತ್‌ನ ಈ 91 ನೇ ಸಂಚಿಕೆ ಬಹಳ ವಿಶೇಷವಾಗಿದೆ, ಏಕೆಂದರೆ ಭಾರತವು ಶೀಘ್ರದಲ್ಲೇ ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಲಿದೆ ಎಂದು ಅವರು ಹೇಳಿದರು.

ಕೇಳುಗರು ಸ್ವತಂತ್ರ ಭಾರತದಲ್ಲಿ ಜನಿಸಿದ್ದು ಅದೃಷ್ಟವಂತರು ಎಂದು ಪ್ರಧಾನಿ ಹೇಳಿದರು. ಜನರು ಗುಲಾಮಗಿರಿಯ ಯುಗದಲ್ಲಿ ಜನಿಸಿದ್ದರೆ ಈ ದಿನವನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ, ಆ ಕಾಲದಲ್ಲಿ ಬದುಕಿದ ಜನರು ಗುಲಾಮಗಿರಿ ಮತ್ತು ಅಧೀನದಿಂದ ಸ್ವಾತಂತ್ರ್ಯಕ್ಕಾಗಿ ಹಂಬಲಿಸುತ್ತಿದ್ದರು. ಲಕ್ಷಾಂತರ ದೇಶವಾಸಿಗಳು ಇದರ ವಿರುದ್ಧ ಹೋರಾಡಿದರು ಮತ್ತು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದರು ಎಂದರು.

ಇಂದು ಶಹೀದ್ ಉಧಮ್ ಸಿಂಗ್ ಅವರ ಹುತಾತ್ಮ ದಿನ. ಪ್ರಧಾನಿಯವರು ಅವರಿಗೆ ಹಾಗೂ ದೇಶಕ್ಕಾಗಿ ತಮ್ಮನ್ನು ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ಮೋದಿ ಶ್ರದ್ಧಾಂಜಲಿ ಅರ್ಪಿಸಿದರು.  ಆಯೋಜಿಸಲಾಗಿದೆ.

ಆಜಾದಿ ಕಿ ರೈಲ್‌ಗಡಿ ಔರ್ ರೈಲು ನಿಲ್ದಾಣ ಎಂಬ ಕುತೂಹಲಕಾರಿ ಪ್ರಯತ್ನವನ್ನು ಈ ತಿಂಗಳು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ರೈಲ್ವೆಯ ಪಾತ್ರವನ್ನು ಜನರಿಗೆ ತಿಳಿಸುವುದು ಈ ಪ್ರಯತ್ನದ ಉದ್ದೇಶವಾಗಿದೆ ಎಂದರು.

ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ನಡೆಯುತ್ತಿರುವ ಹರ್ ಘರ್ ತಿರಂಗ ಅಭಿಯಾನದ ಕುರಿತು ಪ್ರಧಾನಿ ಮಾತನಾಡಿದರು. ಅವರು ಕೇಳುಗರನ್ನು ಈ ಆಂದೋಲನದ ಭಾಗವಾಗುವಂತೆ ಕೇಳಿಕೊಂಡರು ಮತ್ತು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳನ್ನು ಅಲಂಕರಿಸಬೇಕು ಎಂದು ಕೇಳಿಕೊಂಡರು. ತ್ರಿವರ್ಣ ಧ್ವಜವು ಜನರನ್ನು ಸಂಪರ್ಕಿಸುತ್ತದೆ ಮತ್ತು ದೇಶಕ್ಕಾಗಿ ಏನನ್ನಾದರೂ ಮಾಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು. ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಜನರು ತ್ರಿವರ್ಣ ಧ್ವಜವನ್ನು ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರವಾಗಿ ಬಳಸಬಹುದು ಎಂದು ಅವರು ಸಲಹೆ ನೀಡಿದರು. ಭಾರತದ ಧ್ವಜದೊಂದಿಗೆ ಆಗಸ್ಟ್ 2 ವಿಶೇಷ ಸಂಬಂಧವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ದಿನ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಳಿ ವೆಂಕಯ್ಯನವರ ಜನ್ಮದಿನ. ತ್ರಿವರ್ಣ ಧ್ವಜವನ್ನು ರೂಪಿಸುವಲ್ಲಿ ಅವರ ಪಾತ್ರವು ಅತ್ಯಂತ ಮಹತ್ವದ್ದಾಗಿದೆ ಎಂದರು.

ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಸಂಪೂರ್ಣ ಭಕ್ತಿಯಿಂದ ಪಾಲಿಸಬೇಕು ಎಂಬುದು ಆಜಾದಿ ಕಾ ಅಮೃತ್ ಮಹೋತ್ಸವದ ಬಹುದೊಡ್ಡ ಸಂದೇಶವಾಗಿದೆ ಎಂದು ಪ್ರಧಾನಿ ಹೇಳಿದರು. ಮುಂದಿನ 25 ವರ್ಷಗಳ ಅಮೃತ ಕಾಲವೂ ಕರ್ತವ್ಯಕಾಲ, ಪ್ರತಿಯೊಬ್ಬ ದೇಶವಾಸಿಯ ಕರ್ತವ್ಯದ ಅವಧಿಯಾಗಿದೆ ಎಂದರು.

“ಕರ್ನಾಟಕದಲ್ಲಿ ಕೆಲ ವಾರಗಳ ಹಿಂದೆ ಅಮೃತ ಭಾರತಿಗೆ ಕನ್ನಡದಾರತಿ ಹೆಸರಿನ ಒಂದು ವಿಭಿನ್ನ ಅಭಿಯಾನವನ್ನು ನಡೆಸಲಾಯಿತು. ಇದರಡಿ ರಾಜ್ಯದ 70 ಸ್ಥಳಗಳಲ್ಲಿ ಸ್ವಾತಂತ್ರದ ಅಮೃತ ಮಹೋತ್ಸವದ ಸಂಬಂಧಿತ ಭವ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಇದರಲ್ಲಿ ಕರ್ನಾಟಕದ ಮಹಾನ್ ಸ್ವಾತಂತ್ರ ಸೇನಾನಿಗಳನ್ನು ಸ್ಮರಿಸುವ ಜೊತೆಗೆ ಸ್ಥಳೀಯ ಸಾಹಿತ್ಯ ಸಾಧನೆಗಳನ್ನು ಕೂಡ ಮುನ್ನಲೆಗೆ ತರುವ ಪ್ರಯತ್ನ ನಡೆಸಲಾಯಿತು” ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top