News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ಅವರನ್ನು ಬಂಧಿಸಿದ ಇಡಿ

ಮುಂಬಯಿ: ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ಮುಂಬೈನಲ್ಲಿ ಮಧ್ಯರಾತ್ರಿ ಜಾರಿ ನಿರ್ದೇಶನಾಲಯ (ಇಡಿ) ಅವರ ನಿವಾಸದಲ್ಲಿ ಗಂಟೆಗಳ ಶೋಧ ಕಾರ್ಯ ನಡೆಸಿದ ನಂತರ ಬಂಧಿಸಿದೆ.

ಆಪಾದಿತ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಶಿವಸೇನೆಯ ಮುಖ್ಯ ವಕ್ತಾರರೂ ಆಗಿರುವ ಸಂಜಯ್ ರಾವತ್ ಅವರನ್ನು ಇಂದು ಬೆಳಗ್ಗೆ 11.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಎರಡು ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ನಂತರ ಇಡಿ ಅಧಿಕಾರಿಗಳು ಭಾನುವಾರ ಭಾಂಡಪ್‌ನಲ್ಲಿರುವ ರಾವತ್ ಅವರ ಮನೆಯಲ್ಲಿ ಶೋಧ ನಡೆಸಿದ್ದರು. ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಇಡಿ ಅಧಿಕಾರಿಗಳು ಅವರ ನಿವಾಸದಿಂದ 11.50 ಲಕ್ಷ ರೂ. ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮುಂಬೈನಲ್ಲಿ ಚಾಲ್‌ನ ಪುನರಾಭಿವೃದ್ಧಿ ಮತ್ತು ಅವರ ಪತ್ನಿ ಮತ್ತು ನಿಕಟ ಸಹಚರರನ್ನು ಒಳಗೊಂಡ ಸಂಬಂಧಿತ ವಹಿವಾಟಿಗೆ ಸಂಬಂಧಿಸಿದ ಹಣಕಾಸು ವಂಚನೆ ಪ್ರಕರಣದಲ್ಲಿ ಇಡಿ ರಾವುತ್ ಅವರನ್ನು ವಿಚಾರಣೆ ನಡೆಸಲು ಬಯಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top