News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಸೂದೆ ಅಂಗೀಕಾರದಲ್ಲಿ ದೇಶದಲ್ಲೇ ಕರ್ನಾಟಕ ವಿಧಾನಸಭೆ ನಂ.1

ನವದೆಹಲಿ: ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಮಸೂದೆಗಳನ್ನು ಅಂಗೀಕಾರ ಮಾಡಿದ ವಿಧಾನಸಭೆ ಎಂಬ ಹೆಗ್ಗಳಿಕೆಗೆ ಕರ್ನಾಟಕ ವಿಧಾನಸಭೆ ಪಾತ್ರವಾಗಿದೆ. ಸತತ ಎರಡನೇ ಬಾರಿಗೆ ರಾಜ್ಯ ವಿಧಾನಸಭೆ ಈ ಗೌರವಕ್ಕೆ ಪಾತ್ರವಾಗಿರುವುದು ವಿಶೇಷ.

‘ಪಿಆರ್‌ಎಸ್ ಲೆಜಿಸ್ಲೇಟಿವ್’ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದೆ.

ಸಮೀಕ್ಷೆ ಪ್ರಕಾರ 2021 ರಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ 48 ಮಸೂದೆಗಳು ಅಂಗೀಕಾರ ಪಡೆದುಕೊಂಡಿವೆ.

2021 ರಲ್ಲಿ ಎಲ್ಲಾ ರಾಜ್ಯಗಳ ಶಾಸನಸಭೆಗಳು ಒಟ್ಟಾರೆ ಸರಾಸರಿ ವಾರ್ಷಿಕ 21 ದಿನಗಳ ಕಾಲ ಕಲಾಪವನ್ನು ನಡೆಸಿದೆ. ಈ ಅವಧಿಯಲ್ಲಿ ಆನ್ಲೈನ್ ಗೇಮಿಂಗ್‌ಗೆ ನಿರ್ಬಂಧ, ಮತಾಂತರ, ಗೋ ರಕ್ಷಣೆ ಸೇರಿದಂತೆ 500ಕ್ಕೂ ಹೆಚ್ಚು ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇವುಗಳ ಪೈಕಿ ಕರ್ನಾಟಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಅಂದರೆ 48 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆಯಲ್ಲಿ ಕೇವಲ ಎರಡು ಮಸೂದೆಗಳನ್ನು ಅಂಗೀಕಾರ ಮಾಡಿರುವ ದೆಹಲಿ ವಿಧಾನಸಭೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top