News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಕಿಪಾಕ್ಸ್ ಹಾಗೂ ಮಳೆ ಹಾನಿ ಕುರಿತು ನಾಳೆ ಸಭೆ

ಬೆಂಗಳೂರು: ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ಕೊಪ್ಪಳ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸ್ಥಳ ವೀಕ್ಷಣೆ ಮಾಡಲಿದ್ದೇನೆ. ಬೆಟ್ಟದ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ ಎಂದರು.

ಆದಷ್ಟೂ ಬೇಗ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಅನುಮತಿ ನೀಡಲಾಗಿದೆ. ಭೂಸ್ವಾಧೀನದ ಕೆಲಸಗಳು ಬಾಕಿ ಇದ್ದು, ಕಾಮಗಾರಿ ಯನ್ನು ಆದಷ್ಟೂ ಬೇಗ ಪ್ರಾರಂಭಿ ಸಲಾಗುವುದು ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top