News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವರಮಹಾಲಕ್ಷ್ಮೀ ಹಬ್ಬದಂದು ಮುಜರಾಯಿ ದೇಗುಲಗಳಲ್ಲಿ ಮಹಿಳೆಯರಿಗೆ ಬಳೆ, ಅರಶಿಣ-ಕುಂಕುಮ ವಿತರಣೆ

ನವದೆಹಲಿ: ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದಲ್ಲಿ ವಿಶೇಷವಾಗಿ ಆಚರಿಸಲು ಸರ್ಕಾರ ಮುಂದಾಗಿದೆ.

ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದು, ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ  ಕಸ್ತೂರಿ ಅರಿಶಿನ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ನಿರ್ದೇಶಿಸಿದ್ದಾರೆ.

“ದೀಪಾವಳಿಯ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಗೋಪೂಜೆ, ಯುಗಾದಿ ಹಬ್ಬವನ್ನು ಧಾರ್ಮಿಕ ದಿನವಾಗಿ ಆಚರಣೆ ಮಾಡುತ್ತಿದ್ದೇವೆ. ಈ ಬಾರಿ ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯಿರಿಗೆ ವಿಶೇಷ ಗೌರವ ನೀಡಲಿದ್ದೇವೆ” ಎಂದಿದ್ದಾರೆ

ಈ ಬಗ್ಗೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದಿದ್ದಾರೆ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top