ನವದೆಹಲಿ: 2016ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಆರಂಭಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜನವರಿ 1, 2016ರಿಂದಲೇ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಕೇಳಿಕೊಂಡಿದ್ದಾರೆ.
ರಾಮ ಮಂದಿರ ನಿರ್ಮಾಣದ ಸಂಬಂಧ ಮಾತುಕತೆ ನಡೆಸುವ ಸಲುವಾಗಿ ರಾಷ್ಟ್ರೀಯ ಕಾರ್ಯಕಾರಿಣಿಯ ವಿಶೇಷ ಅಧಿವೇಶನವನ್ನು ಕರೆಯುವಂತೆಯೂ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಬಳಿ ಕೇಳಿಕೊಂಡಿದ್ದಾರೆ.
ಈ ಬಗ್ಗೆ ಷಾ ಅವರಿಗೆ ಪತ್ರ ಬರೆದಿರುವ ಅವರು, ಪ್ರಸ್ತುತ ಅಯೋಧ್ಯೆಯಲ್ಲಿರುವ ಮಸೀದಿಯನ್ನು ಅಲ್ಲಿಂದ ಶಿಫ್ಟ್ ಮಾಡಲು ನ್ಯಾಯಾಲಯದ ಸಮ್ಮತಿ ಪಡೆಯುವಂತೆ ಕೋರಿದ್ದಾರೆ.
ಹಿಂದುತ್ವ ಬಿಜೆಪಿಯ ಪ್ರಮುಖ ಸಿದ್ಧಾಂತವಾಗಿದ್ದು, ಈ ಬಗೆಗೆ ವಿಶೇಷ ಗಮನ ನೀಡುವ ಅವಶ್ಯಕತೆ ಇದೆ ಎಂದು ಸ್ವಾಮಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.