ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಅಫ್ಘಾನಿಸ್ಥಾನದ ಕಾಬೂಲ್‌ನಲ್ಲಿ ಅಮೆರಿಕಾ ನಡೆಸಿದ ಡ್ರೋನ್ ದಾಳಿಯಲ್ಲಿ ಜಾಗತಿಕ ಭಯೋತ್ಪಾದಕ ಅಲ್-ಖೈದಾ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹ್ರಿ ಕೊಲ್ಲಲ್ಪಟ್ಟಿದ್ದಾನೆ ಎಂದು ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.
ಸೆಪ್ಟೆಂಬರ್ 11, 2001 ರಂದು ಅಮೆರಿಕಾ ಮೇಲೆ ನಡೆದ ದಾಳಿ ಸಂತ್ರಸ್ಥರ ಕುಟುಂಬಗಳಿಗೆ ಈ ಕಾರ್ಯಾಚರಣೆಯು ನ್ಯಾಯವನ್ನು ಒದಗಿಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಅಲ್-ಜವಾಹ್ರಿ ಮತ್ತು ಒಸಾಮಾ ಬಿನ್ ಲಾಡೆನ್ 9/11 ದಾಳಿಯ ಸಂಚು ರೂಪಿಸಿದವರಾಗಿದ್ದಾರೆ. ಬಿನ್ ಲಾಡೆನ್ ಅನ್ನು ಮೇ 2, 2011 ರಂದು ಕಾರ್ಯಾಚರಣೆ ನಡೆಸಿ ಪಾಕಿಸ್ಥಾನದಲ್ಲಿ ಕೊಲ್ಲಲಾಯಿತು.
ಯುಎಸ್ ಗುಪ್ತಚರ ಅಧಿಕಾರಿಗಳು ಕಾಬೂಲ್ ಡೌನ್‌ಟೌನ್‌ನಲ್ಲಿರುವ ಮನೆಯೊಂದರಲ್ಲಿ ಅಲ್-ಜವಾಹ್ರಿ ಇರುವುದನ್ನು ಪತ್ತೆಹಚ್ಚಿದರು, ಅಲ್ಲಿ ಆತ ತನ್ನ ಕುಟುಂಬದೊಂದಿಗೆ ಅಡಗಿಕೊಂಡಿದ್ದ. ಬೈಡನ್ ಅವರು ಕಳೆದ ವಾರ ಆತನ ವಿರುದ್ಧ ಕಾರ್ಯಾಚರಣೆಯನ್ನು ನಡೆಸಲು ಅನುಮೋದನೆ ನೀಡಿದರು ಮತ್ತು ಭಾನುವಾರ ಕಾರ್ಯಾಚರಣೆಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಫ್ಘಾನಿಸ್ಥಾನವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಲು ಬಿಡುವುದಿಲ್ಲ ಎಂದು ಬೈಡನ್ ಹೇಳಿದ್ದಾರೆ.
ಎರಡು ದಶಕಗಳ ನಂತರ ಅಮೇರಿಕನ್ ಪಡೆಗಳು ಅಫ್ಘಾನ್ ತೊರೆದ ಕೇವಲ 11 ತಿಂಗಳ ನಂತರ ಈ ಕಾರ್ಯಾಚರಣೆ ನಡೆದಿದೆ.
On Saturday, at my direction, the United States successfully conducted an airstrike in Kabul, Afghanistan that killed the emir of al-Qa’ida: Ayman al-Zawahiri.
Justice has been delivered.
— President Biden (@POTUS) August 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.