News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ, ಮಾಲ್ಡೀವ್ಸ್‌ ಅಧ್ಯಕ್ಷರ ನಡುವೆ ಮಾತುಕತೆ: ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಎರಡೂ ಕಡೆಯವರು ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು ಮತ್ತು ಅಭಿವೃದ್ಧಿ ಪಾಲುದಾರಿಕೆ, ವ್ಯಾಪಾರ, ಸಂಪರ್ಕ ಮತ್ತು P2P ಸಂಬಂಧಗಳ ಕ್ಷೇತ್ರಗಳಲ್ಲಿ ಸಂಪರ್ಕವನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಮಾತುಕತೆಯ ನಂತರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಮೋದಿ ಅವರು ಗ್ರೇಟರ್ ಮಾಲೆಯಲ್ಲಿ 4,000 ಸಾಮಾಜಿಕ ವಸತಿ ಘಟಕಗಳ ನಿರ್ಮಾಣದ ಯೋಜನೆಗಳನ್ನು ಪರಿಶೀಲಿಸಲಾಗಿದೆ, ಭಾರತವು ಹೆಚ್ಚುವರಿಯಾಗಿ 2,000 ಸಾಮಾಜಿಕ ವಸತಿ ಘಟಕಗಳಿಗೆ ಆರ್ಥಿಕ ನೆರವು ನೀಡುತ್ತದೆ ಎಂದು  ಹೇಳಿದ್ದಾರೆ. ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಭಾರತವು 100 ಮಿಲಿಯನ್ ಡಾಲರ್‌ಗಳ ಹೆಚ್ಚುವರಿ ಸಾಲವನ್ನು ನೀಡಲು ನಿರ್ಧರಿಸಿದೆ ಎಂದಿದ್ದಾರೆ

ಹಿಂದೂ ಮಹಾಸಾಗರದಲ್ಲಿ ಟ್ರಾನ್ಸ್-ನ್ಯಾಷನಲ್ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆಯ ಬೆದರಿಕೆ ಗಂಭೀರವಾಗಿದೆ. ಆದ್ದರಿಂದ, ಇಡೀ ಪ್ರದೇಶದ ಶಾಂತಿ ಮತ್ತು ಸ್ಥಿರತೆಗೆ ರಕ್ಷಣೆ ಮತ್ತು ಭದ್ರತೆಯ ಕ್ಷೇತ್ರದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ನಿಕಟ ಸಂಪರ್ಕ ಮತ್ತು ಸಮನ್ವಯವು ಅತ್ಯಗತ್ಯ ಎಂದು ಮೋದಿ ಪ್ರತಿಪಾದಿಸಿದ್ದಾರೆ.

ಭಾರತ-ಮಾಲ್ಡೀವ್ಸ್ ಸಹಭಾಗಿತ್ವವು ಎರಡೂ ದೇಶಗಳ ನಾಗರಿಕರ ಹಿತದೃಷ್ಟಿಯಿಂದ ಕೆಲಸ ಮಾಡುವುದಲ್ಲದೆ, ಈ ಪ್ರದೇಶಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಮೂಲವಾಗಿದೆ ಎಂದು ಪ್ರಧಾನಿ ಹೇಳಿದರು. ಮಾಲ್ಡೀವ್ಸ್‌ನಲ್ಲಿ ಯಾವುದೇ ಅಗತ್ಯ ಅಥವಾ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ಮೊದಲ ಪ್ರತಿಸ್ಪಂದಕನಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಮಾಲ್ಡೀವ್ಸ್-ಭಾರತದ ಸಂಬಂಧವು ರಾಜತಾಂತ್ರಿಕತೆಯನ್ನು ಮೀರಿದೆ ಮತ್ತು ಈ ಭೇಟಿಯು ಉಭಯ ದೇಶಗಳ ನಡುವಿನ ನಿಕಟ ಬಾಂಧವ್ಯವನ್ನು ದೃಢೀಕರಿಸುತ್ತದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರು ಹೇಳಿದರು.

ಭಾರತ ಮತ್ತು ಮಾಲ್ಡೀವ್ಸ್ ಸೈಬರ್ ಭದ್ರತೆ, ವಿಪತ್ತು ನಿರ್ವಹಣೆ ಮತ್ತು ಪೊಲೀಸ್ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡವು.‌

ಸೋಲಿಹ್ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಸೋಲಿಹ್ ಅವರು ನಾಲ್ಕು ದಿನಗಳ ಭಾರತ ಭೇಟಿಗಾಗಿ ನಿನ್ನೆ ನವದೆಹಲಿಗೆ ಆಗಮಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top