ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯವು ದೇಶದ 12 ಕಡೆಗಳಲ್ಲಿ ದಾಳಿ ನಡೆಸಿದೆ. ನ್ಯಾಷನಲ್ ಹೆರಾಲ್ಡ್ ಕೇಂದ್ರ ಕಚೇರಿಯ ಮೇಲು ದಾಳಿ ನಡೆಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದೆ. ಇವರ ವಿಚಾರಣೆಯ ನಂತರ ಈ ದಾಳಿ ನಡೆದಿದ್ದು ಭಾರೀ ಕುತೂಹಲ ಕೆರಳಿಸಿದೆ.
ದಾಳಿಗಳ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ ಕ್ರಿಮಿನಲ್ ಸೆಕ್ಷನ್ ಅಡಿಯಲ್ಲಿ ಹಣ ವರ್ಗಾವಣೆಯ ಜಾಡು ಮತ್ತು ನ್ಯಾಷನಲ್ ಹೆರಾಲ್ಡ್ ಸಂಬಂಧಿತ ವಹಿವಾಟುಗಳಲ್ಲಿ ಭಾಗಿಯಾಗಿರುವ ಸಂಸ್ಥೆಗಳ ವಿರುದ್ಧ ಹೆಚ್ಚುವರಿ ಸಾಕ್ಷಿಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಅಧೀನದಲ್ಲಿರುವ ಯಂಗ್ ಇಂಡಿಯಾ ನಡೆಸುತ್ತಿರುವ ಸಂಸ್ಥೆಯಾಗಿದ್ದು, ಸೋನಿಯಾ ಮತ್ತು ರಾಹುಲ್ ಪಾಲುದಾರಿಕೆ ಹೊಂದಿದ್ದಾರೆ. ಈ ಸಂಸ್ಥೆಯಡಿ ಭಾರೀ ಭ್ರಷ್ಟಾಚಾರಗಳನ್ನು ನಡೆಸಿರುವ ಬಗ್ಗೆ ಗುಮಾನಿ ಇದ್ದು, ಇಡಿ ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಬಯಲಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.