News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಕಿಫಾಕ್ಸ್‌: ಏರ್‌ಪೋರ್ಟ್‌ನಲ್ಲಿ ಥರ್ಮಲ್ ಸ್ಕ್ರೀನಿಂಗ್‌, ರಾಜ್ಯ ಗಡಿಯಲ್ಲಿ ನಿಗಾ- ಸುಧಾಕರ್

ಬೆಂಗಳೂರು: ಮಂಕಿಫಾಕ್ಸ್ ಕಾಯಿಲೆ ದೇಶವನ್ನು ಆತಂಕಕ್ಕೀಡು ಮಾಡಿದೆ. ಕರ್ನಾಟಕದಲ್ಲೂ ಕೂಡ ಕಾಯಿಲೆಯ ಬಗ್ಗೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಅವರು, “ಮಂಕಿಫಾಕ್ಸ್ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ.‌ ಬೆಂಗಳೂರಿನ ಇಬ್ಬರ ವರದಿ ನಗೆಟಿವ್ ಬಂದಿದೆ. ಇನ್ನು ಒಬ್ಬರ ವರದಿ ಬರಬೇಕು” ಎಂದಿದ್ದಾರೆ.

“ಕೇರಳ ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನ ನಗಾ ಇಡಲಾಗಿದೆ. ಕೇರಳದಲ್ಲಿ ನಾಲ್ಕು ಮತ್ತು ದೆಹಲಿಯಲ್ಲಿ ಇಬ್ಬರು ಸೋಂಕಿತರಿದ್ದಾರೆ. ಕರ್ನಾಟಕದಲ್ಲಿ ಮೂವರು ವ್ಯಕ್ತಿಗಳ ಮೇಲೆ ಸಂಶಯದ ಆಧಾರದ ಮೇಲೆ ಪರೀಕ್ಷೆ ನಡೆಸಿದ್ದೇವೆ. ಇಬ್ಬರ ವರದಿ ನೆಗೆಟಿವ್ ಬಂದಿದೆ. ಇನ್ನೊಬ್ಬರ ವರದಿ ಬರಬೇಕಷ್ಟೇ. ಜನರು ಆತಂಕ ಪಡುವ ಅಗತ್ಯವಿಲ್ಲ” ಎಂದಿದ್ದಾರೆ.

ಸೋಂಕಿತರಿಗಾಗಿ ಬೆಂಗಳೂರಿನ ಸಾಂಕ್ರಾಮಿಕ ರೋಗಗಳ(ಇ.ಡಿ) ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾವುದೇ ವ್ಯಕ್ತಿಗೆ ಸೋಂಕು ದೃಢಪಟ್ಟರೆ ಅವರನ್ನು 21 ದಿನಗಳ ಕಾಲ ಐಸೋಲೇಟ್ ಮಾಡಬೇಕು. 21 ದಿನ ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಚರ್ಮದ ಮೇಲೆ ಆಗಿರುವ ಗಾಯ ಗುಣಮುಖ ಆಗುವವರೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿಸಿದರು.

ಮಂಕಿಪಾಕ್ಸ್ ಆರಂಭದಲ್ಲಿ ಜ್ವರ, ಹಾಗೂ ಚರ್ಮದ ಮೇಲೆ ತುರಿಕೆಗಳು ಕಂಡು ದೊಡ್ಡ ಗುಳ್ಳೆಗಳಾಗುತ್ತವೆ. ಈ ಲಕ್ಷಣ ಇದ್ದವರನ್ನು ತಪಾಸಣೆ ಮಾಡಲಾಗುವುದು. ಮುಖ್ಯಮಂತ್ರಿಗಳ ಸೂಚನೆಯಂತೆ, ಏರ್ಪೋರ್ಟ್ ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅನುಮಾನ ಬಂದರೆ ತಪಾಸಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ವರದಿಗಳು ಹೇಳುವ ಪ್ರಕಾರ ಸೋಂಕಿತರ ಜೊತೆ ದೀರ್ಘ ಕಾಲದ ಸಂಪರ್ಕ ಹೊಂದಿರುವವರಿಗೆ ಮಾತ್ರ ಇದು ಹರಡಲು ಸಾಧ್ಯವಿದೆ. ಕೋವಿಡ್ ರೀತಿ ಹರಡುವ ಸಾಂಕ್ರಾಮಿಕ ರೋಗ ಇದಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top