News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌: ಬೆಳ್ಳಿ ಗೆದ್ದ ರಿಲೇ ತಂಡದ ಕನ್ನಡತಿ ಪ್ರಿಯಾ ಮೋಹನ್‌ಗೆ 5 ಲಕ್ಷ ರೂ ಪುರಸ್ಕಾರ

ಬೆಂಗಳೂರು: ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್‌‌ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತ ರಿಲೇ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ಪ್ರಿಯಾ ಮೋಹನ್, ಭರತ್ ಶ್ರೀಧರ್, ರೂಪಾಲ್‌ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ.

ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದರಲ್ಲೇ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕ‌ಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಅಭಿನಂದನೆ ಎಂದು ಸಚಿವರು ಹೇಳಿದ್ದಾರೆ.

ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top