News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚೀನಿ ಸೇರಿದಂತೆ ವಿದೇಶಗಳ 348 ಮೊಬೈಲ್ ಆ್ಯಪ್‌ ನಿರ್ಬಂಧಿಸಿದೆ ಕೇಂದ್ರ

ನವದೆಹಲಿ: ಚೀನಾ ಸೇರಿದಂತೆ ವಿವಿಧ ದೇಶಗಳು ಅಭಿವೃದ್ಧಿಪಡಿಸಿದ 348 ಮೊಬೈಲ್ ಅಪ್ಲಿಕೇಶನ್‌ಗಳನ್ನು ಸರ್ಕಾರ ಗುರುತಿಸಿ ನಿರ್ಬಂಧಿಸಿದೆ. ಬಳಕೆದಾರರ ಮಾಹಿತಿಯನ್ನು ಸಂಗ್ರಹಿಸಿ ಅನಧಿಕೃತ ರೀತಿಯಲ್ಲಿ ವಿದೇಶಕ್ಕೆ ರವಾನಿಸುತ್ತಿದ್ದ ಆರೋಪ ಇವುಗಳ ಮೇಲಿತ್ತು.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಲೋಕಸಭೆಯಲ್ಲಿ ಬಿಜೆಪಿಯ ರೋಡ್ಮಲ್ ನಗರ್ ಅವರ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿಯನ್ನು ನೀಡಿದರು.

“ಈ 348 ಮೊಬೈಲ್ ಅಪ್ಲಿಕೇಶನ್‌ಗಳು ಬಳಕೆದಾರರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದವು ಮತ್ತು ಪ್ರೊಫೈಲಿಂಗ್‌ಗಾಗಿ ದೇಶದ ಹೊರಗಿನ ಸರ್ವರ್‌ಗಳಿಗೆ ಅನಧಿಕೃತ ರೀತಿಯಲ್ಲಿ ರವಾನಿಸುತ್ತಿದ್ದವು” ಎಂದು ಚಂದ್ರಶೇಖರ್ ಹೇಳಿದ್ದಾರೆ.

“ಕೇಂದ್ರ ಗೃಹ ಸಚಿವಾಲಯವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ವಿನಂತಿಯನ್ನು ಆಧರಿಸಿ ಆ 348 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಭಾರತದ ರಕ್ಷಣೆ ಮತ್ತು ರಾಜ್ಯದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

ಈ ಎಲ್ಲಾ ಆ್ಯಪ್‌ಗಳನ್ನು ಚೀನಾ ಅಭಿವೃದ್ಧಿಪಡಿಸಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಂದ್ರಶೇಖರ್, ಈ ಅಪ್ಲಿಕೇಶನ್‌ಗಳನ್ನು ಚೀನಾ ಸೇರಿದಂತೆ ವಿವಿಧ ದೇಶಗಳು ಅಭಿವೃದ್ಧಿಪಡಿಸಿವೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top