News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಟೋಲ್‌ ಪ್ಲಾಜಾ ಬದಲಿಗೆ ಹೊಸ ತಂತ್ರಜ್ಞಾನ ಪರಿಚಯಿಸಲು ಕೇಂದ್ರ ಚಿಂತನೆ

ನವದೆಹಲಿ: ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ದೇಶದಲ್ಲಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮುಂದಿನ ಆರು ತಿಂಗಳಲ್ಲಿ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗುವುದು. ಸರ್ಕಾರವು ಎರಡು ಆಯ್ಕೆಗಳನ್ನು ಹುಡುಕುತ್ತಿದ್ದು, ಅದರಲ್ಲಿ ಒಂದು ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆಯಾಗಿದ್ದು, ಜಿಪಿಎಸ್ ವ್ಯವಸ್ಥೆಯ ಮೂಲಕ ಟೋಲ್ ಅನ್ನು ನೇರವಾಗಿ ಪ್ರಯಾಣಿಕರ ಬ್ಯಾಂಕ್ ಖಾತೆಗಳಿಂದ ತೆಗೆಯಲಾಗುತ್ತದೆ ಮತ್ತು ಇನ್ನೊಂದು ಆಯ್ಕೆಯು ವಾಹನಗಳ ನಂಬರ್ ಪ್ಲೇಟ್‌ಗಳ ಮೂಲಕ‌ ಹಣ ಪಡೆಯುವುದಾಗಿದೆ. ಟೋಲ್ ಸಂಗ್ರಹಿಸಲು ಉಪಗ್ರಹ ಆಧಾರಿತ ವ್ಯವಸ್ಥೆಯನ್ನು ಬಳಸುವಾಗ ಫಾಸ್ಟ್ಯಾಗ್ ಬದಲಿಗೆ ಜಿಪಿಎಸ್ ಅನ್ನು ಪರಿಚಯಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ಇದೆ ಎಂದು ಅವರು ಹೇಳಿದರು.

ಸರ್ಕಾರವು ಟೋಲ್ ಸಂಗ್ರಹಕ್ಕೆ ಅತ್ಯುತ್ತಮ ತಂತ್ರಜ್ಞಾನವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದೆ ಮತ್ತು ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಮಹತ್ವದ ಕಾನೂನನ್ನು ತರಲಿದೆ ಎಂದು ಗಡ್ಕರಿ ಹೇಳಿದರು.

ಟೋಲ್ ಪ್ಲಾಜಾಗಳಲ್ಲಿ ಟ್ರಾಫಿಕ್ ಜಾಮ್‌ನಿಂದ ಜನರಿಗೆ ಪರಿಹಾರ ನೀಡಲು ಈ ವ್ಯವಸ್ಥೆ ಮುಖ್ಯವಾಗಿದೆ ಎಂದು ಅವರು ಹೇಳಿದರು. ಫಾಸ್ಟ್ಯಾಗ್ ಪರಿಚಯಿಸಿದ ನಂತರ ಟೋಲ್ ಸಂಗ್ರಹವು ದಿನಕ್ಕೆ 120 ಕೋಟಿ ರೂಪಾಯಿಗಳಿಗೆ ಗಣನೀಯವಾಗಿ ಏರಿದೆ ಎಂದುಗಡ್ಕರಿ ತಿಳಿಸಿದರು.

ಇಲ್ಲಿಯವರೆಗೆ, 5.56 ಕೋಟಿ ಫಾಸ್ಟ್‌ಟ್ಯಾಗ್‌ಗಳನ್ನು ನೀಡಲಾಗಿದೆ ಮತ್ತು ಅದರ ವ್ಯಾಪ್ತಿ ಸುಮಾರು 97 ಪ್ರತಿಶತವನ್ನು ತಲುಪಿದೆ ಎಂದು ಸಚಿವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top