News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದ 861 ರೈಲು ನಿಲ್ದಾಣಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ: ಕೇಂದ್ರ

ನವದೆಹಲಿ: ದೇಶಾದ್ಯಂತ 861 ರೈಲು ನಿಲ್ದಾಣಗಳಲ್ಲಿ ಕ್ಲೋಸ್ಡ್ ಸರ್ಕ್ಯೂಟ್ ಟೆಲಿವಿಷನ್ ಅಥವಾ ಸಿಸಿಟಿವಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ನಿನ್ನೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ತಿಳಿಸಿದ್ದಾರೆ.

ನಿಲುಗಡೆ ನಿಲ್ದಾಣಗಳನ್ನು ಹೊರತುಪಡಿಸಿ ಎಲ್ಲಾ ರೈಲು ನಿಲ್ದಾಣಗಳಲ್ಲಿ ಸಿಸಿಟಿವಿಗಳನ್ನು ಒದಗಿಸುವ ಕಾಮಗಾರಿಗಳಿಗೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು.

ರೈಲ್ವೆಯನ್ನು ಜನಸ್ನೇಹಿ ಮತ್ತು ಸುರಕ್ಷಿತವಾಗಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ರೈಲು ನಿಲ್ದಾಣಗಳನ್ನು ಆಧುನಿಕರಿಸುವ ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡುವ ಕಾರ್ಯಗಳು ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ.

 

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top