News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೆಚ್ಚುತ್ತಿದೆ ಮಂಕಿಫಾಕ್ಸ್‌: ಕೇಂದ್ರದಿಂದ ಉನ್ನತ ಆರೋಗ್ಯ ತಜ್ಞರ ಸಭೆ

ನವದೆಹಲಿ: ದೇಶದಲ್ಲಿ ಮಂಕಿಫಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಕಿಪಾಕ್ಸ್ ನಿರ್ವಹಣೆ ಕುರಿತು ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮರುಪರಿಶೀಲಿಸುವ ಅಗತ್ಯತೆಯ ಕುರಿತು ಕೇಂದ್ರವು ಉನ್ನತ ಆರೋಗ್ಯ ತಜ್ಞರ ಸಭೆಯನ್ನು ಇಂದು ಕರೆದಿದೆ.

ಭಾರತದಲ್ಲಿ ಇದುವರೆಗೆ 9 ಮಂಕಿಪಾಕ್ಸ್ ಪ್ರಕರಣಗಳು ಮತ್ತು ಒಂದು ಸಾವು ವರದಿಯಾಗಿದೆ.

ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 31 ವರ್ಷದ ಮಹಿಳೆಯೊಬ್ಬರ ವರದಿ ಪಾಸಿಟಿವ್ ಬಂದಿದೆ. ಇದು ದೇಶದ ಮಹಿಳೆಯರಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ.

ಒಟ್ಟು ಒಂಬತ್ತು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳು ದೆಹಲಿಯಲ್ಲಿ, ಉಳಿದ ಐದು ಕೇರಳದಲ್ಲಿ ವರದಿಯಾಗಿದೆ.

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮರುಪರಿಶೀಲಿಸುವ ತಾಂತ್ರಿಕ ಸಭೆ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಪರಿಹಾರದ ನಿರ್ದೇಶಕರಾದ ಡಾ ಎಲ್ ಸ್ವಸ್ತಿಚರಣ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ ಮತ್ತು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಕೇಂದ್ರವು ಹೊರಡಿಸಿದ ಅಸ್ತಿತ್ವದಲ್ಲಿರುವ ಮಂಕಿಪಾಕ್ಸ್ ಕಾಯಿಲೆಯ ನಿರ್ವಹಣೆಯ ಮಾರ್ಗಸೂಚಿಗಳ ಪ್ರಕಾರ, ಯಾವುದೇ ವ್ಯಕ್ತಿಯು ಕಳೆದ 21 ದಿನಗಳಲ್ಲಿ ಪೀಡಿತ ದೇಶಗಳಿಗೆ ಪ್ರಯಾಣಿಸಿದ ಇತಿಹಾಸವನ್ನು ಹೊಂದಿದ್ದರೆ, ಜ್ವರ, ತಲೆನೋವು, ದೇಹದಭಾಗಗಳಲ್ಲಿ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿದ್ದರೆ ಶಂಕಿತ ಪ್ರಕರಣ ಎಂದು ಪರಿಗಣಿಸಬೇಕು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top