News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್‌ ಹೆಸರು ಶಿಫಾರಸ್ಸು

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಇಂದು ಸುಪ್ರೀಂಕೋರ್ಟ್‌ನ ಉನ್ನತ ಹುದ್ದೆಗೆ ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಯುಯು ಲಲಿತ್ ಅವರ ಹೆಸರನ್ನು  ಶಿಫಾರಸ್ಸು ಮಾಡಿದ್ದಾರೆ.

ಇದರೊಂದಿಗೆ ನ್ಯಾಯಮೂರ್ತಿ ಲಲಿತ್ ಅವರು ಆಗಸ್ಟ್ 27 ರಂದು ದೇಶದ 49 ನೇ ಸಿಜೆಐ ಆಗಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಆಗಿರುವ ರಮಣ ಆಗಸ್ಟ್ 26 ರಂದು ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಲಲಿತ್ ಅವರ ಅಧಿಕಾರವಧಿ ಕೇವಲ 74 ದಿನ ಮಾತ್ರ. ಯಾಕೆಂದರೆ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ ಮತ್ತು ನಂತರ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲಿದ್ದಾರೆ.

ನಿನ್ನೆ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರಿಗೆ ಪತ್ರ ಬರೆದು ತಮ್ಮ ಉತ್ತರಾಧಿಕಾರಿಯ ಹೆಸರನ್ನು ಶಿಫಾರಸು ಮಾಡುವಂತೆ ಮನವಿ ಮಾಡಿದ್ದರು.  ಅದರ ಬಳಿಕ ರಮಣ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸ್ಸು ಮಾಡಿದ್ದಾರೆ.

ನ್ಯಾಯಮೂರ್ತಿ ಯುಯು ಲಲಿತ್ ಅವರು ಪ್ರಸಿದ್ಧ ಹಿರಿಯ ವಕೀಲರಾಗಿದ್ದು, ಅವರು 13 ಆಗಸ್ಟ್, 2014 ರಂದು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು.

ಅವರು ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ. ಅವರು ಆಗಸ್ಟ್ 2017 ರಲ್ಲಿ ‘ತ್ರಿವಳಿ ತಲಾಖ್’ ತೀರ್ಪನ್ನು ನೀಡಿದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top