News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರೀ ಬೇಡಿಕೆ ಹಿನ್ನೆಲೆ ಅಂಚೆ ಕಛೇರಿಯಲ್ಲೂ ತಿರಂಗಾ ಮಾರಾಟ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ದೇಶವ್ಯಾಪಿಯಾಗಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಹಲವು ಅಂಚೆ ಕಚೇರಿಗಳು ಗ್ರಾಹಕರಿಗೆ ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡುತ್ತಿವೆ.

ಅಂಚೆ ಕಚೇರಿಗಳು ರಾಷ್ಟ್ರಧ್ವಜಗಳನ್ನು ಮಾರಾಟ ಮಾಡುತ್ತಿರುವುದು ಇದೇ ಮೊದಲು. ತ್ರಿವರ್ಣ ಧ್ವಜವನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಉತ್ತೇಜಿಸಲು ಅಂಚೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ʼಹರ್‌ ಘರ್‌ ತಿರಂಗಾʼ ಅಭಿಯಾನವು 75ನೇ ಸ್ವಾತಂತ್ರ್ಯ ದಿನದಂದು ಎಲ್ಲಾ ಭಾರತೀಯರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮಾಡುವ ಗುರಿಯನ್ನು ಇಟ್ಟುಕೊಂಡಿದೆ.  ಮೋದಿಯವರ ‘ಹರ್ ಘರ್ ತಿರಂಗಾ’ ಕರೆಯಿಂದಾಗಿ ಈ ವರ್ಷ ಸ್ವಾತಂತ್ರ್ಯ ಸಂದರ್ಭದಲ್ಲಿ ರಾಷ್ಟ್ರಧ್ವಜಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ.

ಭಾರತೀಯರು ಭಾರಿ ಸಂಖ್ಯೆಯಲ್ಲಿ ತ್ರಿವರ್ಣ ಧ್ವಜವನ್ನು ಖರೀದಿಸುತ್ತಿರುವುದರಿಂದ ಕರ್ನಾಟಕ, ಗುಜರಾತ್, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತದ ಮಾರುಕಟ್ಟೆಗಳು ತಿರಂಗಾದಿಂದ ತುಂಬಿ ತುಳುಕುತ್ತಿವೆ ಎಂದು ಮೂಲಗಳು ತಿಳಿಸಿವೆ.

75ನೇ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆ, ದೇಶದಾದ್ಯಂತ ಬಿಜೆಪಿ ನಾಯಕರು ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ತಿರಂಗಾ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಕಾಲ್ನಡಿಗೆ ಮತ್ತು ರಾಷ್ಟ್ರ ಧ್ವಜಗಳೊಂದಿಗೆ ಬೈಕ್‌ಗಳಲ್ಲಿ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ.

ವಿವಿಧ ಸಂಘಟನೆಗಳು, ಪಕ್ಷಗಳು ಕೂಡ ತಿರಂಗಾ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ತಿರಂಗಾ ಬೇಡಿಕೆ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top